Connect with us

Mandya

ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ಸರಬರಾಜು ಮತ್ತು ನೀರು ಮತ್ತು ನೈರ್ಮಲ್ಯ ಆಯಾ ಗ್ರಾಮ ಪಂಚಾಯಿತಿ ಜವಾಬ್ದಾರಿಯಾಗಿದೆ: ಮಮತಾ. ಎಲ್

Published

on

ಮಳವಳ್ಳಿ: ಜನ‌ ವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಬಹುದಾದ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಮಳವಳ್ಳಿ ತಾಲ್ಲೂಕಿನ 39 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಓವರ್ ಹೆಡ್ ಟ್ಯಾಂಕ್, ತೊಂಬೆಗಳು ಹಾಗೂ ಕುಡಿಯುವ ನೀರಿನ ಎಲ್ಲಾ ಮೂಲಗಳನ್ನು ಸ್ವಚ್ಛಗೊಳಿಸಲು ನಿಯಮಾನುಸಾರ ಅಗತ್ಯ ಕ್ರಮವಹಿಸುವಂತೆ ಎಲ್ಲಾ ಗ್ರಾಮ ಪಂಚಾಯಿತಿಯ ಪಿ.ಡಿ.ಓ.ರವರಿಗೆ ನಿರ್ದೇಶನ ನೀಡಲಾಗಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರು ಸರಬರಾಜು ಕೊಳವೆ ಬಾವಿಗಳ ಸುತ್ತ ಸ್ವಚ್ಛತೆ ಕಾಪಾಡಲು ಮತ್ತು ಅದರ ಸುತ್ತ ಯಾವುದೇ ಕಲುಷಿತ ನೀರು ನಿಲ್ಲದಂತೆ, ನೀರು ಸರಬರಾಜು ಮಾಡುವ ಯಾವುದೇ ಪೈಪ್ ಲೈನ್ ನಲ್ಲಿ ಲೀಕೇಜ್ ಇಲ್ಲದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು, ಗ್ರಾಮದ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ನಿಲ್ಲದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಕಾರ್ಯನಿರ್ವಾಹಕ ಅಧಿಕಾರಿಳಾದ ಮಮತಾ. ಎಲ್ ರವರು ತಿಳಿಸಿದರು.

ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವುದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯವನ್ನು ಕಾಪಾಡುವುದು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಕುಡಿಯುವ ನೀರಿನ ವ್ಯವಸ್ಥೆಯಲ್ಲಿರುವ ಪೈಪ್ ಲೈನ್ ಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರೆ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರುನೀರು ಸರಬರಾಜು ಮಾಡುವ ತೊಂಬೆಗಳನ್ನು ಒವರ್ ಟ್ಯಾಂಕ್ ಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಛಗೊಳಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೊಳವೆ ಬಾವಿಗಳ ಹಾಗೂ ಇನ್ನಿತರೆ ಕುಡಿಯುವ ನೀರಿನ ಮೂಲಗಳ ಸುತ್ತಮುತ್ತಲೂ ಇರುವ ಕೊಳಚೆ ನೀರನ್ನು ಸ್ವಚ್ಛಗೊಳಿಸಿ ನೀರಿನ ಮೂಲಗಳನ್ನು ಸುಸ್ಥಿತಿಯಲ್ಲಿಡುವ ಮೂಲಕ ಗ್ರಾಮೀಣ ಜನವಸತಿ ಪ್ರದೇಶಗಳಿಗೆ ನೀರು ಒದಗಿಸಿ ಹಾಗೂ ಗ್ರಾಮ ಅಥವಾ ಜನವಸತಿ ಪ್ರದೇಶಗಳಲ್ಲಿ ನೀರಿನ ವ್ಯವಸ್ಥೆಯಡಿಯಲ್ಲಿ ಬರುವ ಎಲ್ಲಾ ಪೈಪ್ ಲೈನ್ ಗಳನ್ನು ಪ್ರತಿದಿನವೂ ಪರಿಶೀಲನೆ ನಡೆಸಿ ಯಾವುದಾದರೂ ಪೈಪ್ ಲೈನ್ ಗಳು ಹಾನಿಯಾಗಿರುವುದು ಕಂಡುಬಂದರೆ ಗ್ರಾಮ ಪಂಚಾಯಿತಿಯ ಪಿ.ಡಿ.ಓ ಗಳು ಕೂಡಲೇ ದುರಸ್ಥಿ ಕಾರ್ಯ ಕೈಗೊಂಡು ಯಾವುದೇ ಕಲುಷಿತ ನೀರು ಸೇರದಂತೆ ಜಾಗೃತಿ ವಹಿಸಲು ಸೂಚಿಸಿದ್ದಾರೆ.

ನೀರಿನ ಸರಬರಾಜು ವ್ಯವಸ್ಥೆಯಡಿ ಬರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಓವರ್ ಟ್ಯಾಂಕ್‌ ಗಳನ್ನು ಕಾಲ-ಕಾಲಕ್ಕೆ ಸ್ವಚ್ಛಗೊಳಿಸಿ ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಬೇಕು ಎಂದರು.

ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕೊಳಚೆ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು ಆ ನೀರಿನ ಮೂಲದ ಸುತ್ತಲೂ ಕಾಂಕ್ರೀಟ್ ನಿಂದ ಕಟ್ಟೆ ಕಟ್ಟಲು ತಿಳಿಸಿದರು.

ಕೆಲವು ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿರುವ ಕೊಳವೆಬಾವಿಗಳ ಕೇಸಿಂಗ್ ಪೈನ್ ಹಾನಿಯಾಗಿರುವುದು ಕಂಡು ಬಂದಿದ್ದು ಭೂಮಿಯ ಮಟ್ಟಕ್ಕೆ ಅಥವಾ ಅದಕ್ಕಿಂತ ಕೆಳಗಿರುವ ಕೊಳವೆಬಾವಿಗಳ Casing Pipe ಅನ್ನು ಭೂಮಿಯ ಮಟ್ಟದಿಂದ ಎರಡು ಅಡಿ ಎತ್ತರಿಸಿ ಯಾವುದೇ ಕಲುಷಿತ ನೀರು ಸೇರದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಸೂಕ್ತಕ್ರಮ ವಹಿಸುಲು ಸೂಚಿಸಿದರು.

ಪಂಚಾಯತಿಗಳು Field Test Kits & H2S Vials ಗಳನ್ನು ಉಪಯೋಗಿಸಿ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಮಾಡಬೇಕು ಎಂದರು.

ಇದೇ ವೇಳೆ ಕ್ಯಾತನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೊಂಬೆಯನ್ನು ಪರಿಶೀಲನೆ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Mandya

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*

Published

on

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*

ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.

ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.

ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್‌ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.

Continue Reading

Mandya

ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Published

on

ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಶಸ್ತಿ ನೀಡಿ ಗೌರವಿಸಿದರು

Continue Reading

Mandya

ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ

Published

on

ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.

ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.

ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.

Continue Reading

Trending

error: Content is protected !!