Connect with us

Mandya

ನೀರು ಹರಿಸುತ್ತಿರುವುದನ್ನು ಖಂಡಿಸಿ ಕಪ‍್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

Published

on

ಜಿಲ್ಲಾ ರೈತ ಹಿತರಕ್ಷಣಾ ಸಮತಿ, ರೈತ ಸಂಘ, ಬಿಜೆಪಿ, ಜೆಡಿಎಸ್‌ ಮುಖಂಡರನ್ನ ಬಂಧಿಸಿದ ಪೊಲೀಸರು

ಮುಖ್ಯಮಂತ್ರಿ ಗ್ಯಾರಂಟಿ ಕಾರ್ಯಕ್ರಮಕ್ಕೆ ಆಗಮಿಸುವ ದಿನವೇ ಕಪ್ಪು ಪಟ್ಟಿ ಕಟ್ಟಿಕೊಂಡು, ಕಪ್ಪು ಬಾವುಟ ಪ್ರದರ್ಶಿಸಿದ ಹೋರಾಟಗಾರರು

ಮಂಡ್ಯ: ಬೆಂಗಳೂರಿಗೆ ಕುಡಿಯುವ ನೀರು ಬಿಡಲಾಗುತ್ತಿದೆ ಎಂಬ ನೆಪಹೇಳಿಕೊಂಡು ತಮಿಳುನಾಡಿಗೆ ಶನಿವಾರದಿಂದ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಮುಖಂಡರು ಕಪ್ಪು ಪಟ್ಟಿ ಕಟ್ಟಿಕೊಂಡು ಹಾಗೂ ಕಪ್ಪು ಬಾವುಟ ಪ್ರದರ್ಶಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದರು.

ನಗರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಗ್ಯಾರಂಟಿ ಸಮಾವೇಶ ದಿನವೇ ಸರ್‌ಎಂ.ವಿ.ಪ್ರತಿಮೆ ಬಳಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾವೇರಿ ಹೋರಾಟಗಾರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಪ್ಪು ಬಾವುಟ ಪ್ರದರ್ಶಿಸಿದರು. ನಂತರ ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರಿದಂತೆ ರಸ್ತೆಗಿಳಿದ ಹೋರಾಟಗಾರರು ಕುರ್ಚಿಗಳನ್ನು ರಸ್ತೆಯಲ್ಲಿ ಹಾಕಿ ಕುಳಿತುಕೊಂಡು ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೂ ಅಡ್ಡಿಪಡಿಸಿದರು. ಜಿಲ್ಲಾ ರೈತಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಂ. ಮುಖಂಡರಾದ ಕೆ.ಟಿ.ಶ್ರೀಕಂಠೇಗೌಡ, ಅಂಬುಜಮ್ಮ, ಇಂಡುವಾಳು ಚಂದ್ರಶೇಖರ್, ಕನ್ನಡ ಸೇನೆ ಮಂಜುನಾಥ್, ಮಹಾಂತಪ್ಪ ಅವರನ್ನು ಪೊಲೀಸರು ಬಂಧಿಸಿದರು.

ತಮಿಳುನಾಡಿಗೆ ನೀರು ಬಿಟ್ಟು ರೈತರನ್ನು ವಂಚಿಸಿದ ಸರ್ಕಾರವನ್ನು ಪ್ರಶ್ನಿಸಿದ ಪ್ರತಿಭಟನಾಕಾರರನ್ನು ಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಗಾಗಿ ಗ್ಯಾರಂಟಿ ಸಮಾವೇಶವನ್ನ ಮಾಡುತ್ತಿದ್ದಾರೆ, ನೆರೆ ರಾಜ್ಯಕ್ಕೆ ನೀರು ಹರಿಸಿ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ, ನೆರೆ ರಾಜ್ಯ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕೆಆರ್‌ಎಸ್ ಸೇರಿದಂತೆ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ, ನೀರಿಲ್ಲದ ಹಿನ್ನಲೆಯಲ್ಲಿ ರೈತರು ಹೊಸ ಬೆಳೆ ಹಾಕಿಲ್ಲ, ಜಮೀನಿನಲ್ಲಿರುವ ಬೆಳೆಗೆ ನೀರು ನೀಡಿಲ್ಲ, ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ, ಇಂತಹ ಸಂಕಷ್ಟ ಪದ್ದತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ತಂದೊಡ್ಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ನಾಲೆಗಳಿಗೆ ನೀರು ಬಿಡುಗಡೆ ಮಾಡಿ ಎಂದು ರೈತರು ಒತ್ತಾಯ ಮಾಡಿದರು ಸಹ ನೀರು ಬಿಡದ ಸರ್ಕಾರ ಇದೀಗ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುವ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿದೆ, ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ಅಣೆಕಟ್ಟೆ ಭರ್ತಿ ಮಾಡಿಕೊಳ್ಳಲು ನದಿಗೆ ನೀರು ಬಿಡಲಾಗಿದೆ ಎಂದು ಸಬೂಬು ಹೇಳುತ್ತಿರುವ ಸರ್ಕಾರ ರೈತರನ್ನು ದಿಕ್ಕು ತಪ್ಪಿಸುತ್ತಿದೆ. ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯೂಸೆಕ್ ನೀರನ್ನು ಬಿಟ್ಟಿರುವುದು ಏತಕ್ಕೆ ಎಂದು ಪ್ರಶ್ನಿಸಿದರು.

ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ, ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿ ಮುಖಂಡರ ಬಂಧನ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಹೆದ್ದಾರಿಗೆ ಬರುತ್ತಿದ್ದಂತೆ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ವಿವೇಕ್, ಸಿ.ಟಿ.ಜುನಾಥ್, ಶಿವಕುಮಾರ್ ಆರಾಧ್ಯ ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೋಯ್ದರು.

ರೈತರಿಗೆ ಮೋಸ ಮಾಡಿರುವ ಸರ್ಕಾರ, ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿ ತಮಿಳುನಾಡಿಗೆ ಹರಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ದ್ರೋಹ ಮಾಡಿದೆ. ರೈತರ ಹಿತ ಕಾಪಾಡುವುದಾಗಿ ಭರವಸೆ ನೀಡಿದ ಸರ್ಕಾರ ಬೆಳೆದು ನಿಂತಿರುವ ಬೆಳೆಗೆ ನೀರು ನೀಡದೆ, ಜನಜಾನುವಾರುಗಳಿಗೂ ಕುಡಿಯುವ ನೀರು ಇಲ್ಲದಂತೆ ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರದಿಂದಲೇ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡಲಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಬಿಡಲಾಗಿದೆ ಎಂದು ಸುಳ್ಳು ಹೇಳುತ್ತಿದೆ, ಅಷ್ಟೊಂದು ಪ್ರಮಾಣದಲ್ಲಿ ನೀರು ನದಿಗೆ ಹರಿಸುವ ಮೂಲಕ ವಾಮ ಮಾರ್ಗದಲ್ಲಿ ತಮಿಳುನಾಡಿಗೆ ಹರಿಸುತ್ತಿದೆ. ಜಿಲ್ಲೆಯ ರೈತರ ಹಿತ ಕಾಪಾಡದೆ ಬರಗಾಲದ ಸಂಕಷ್ಟದಲ್ಲಿ ರೈತರ ನೆರವಿಗೂ ಬಾರದೆ ಕಾಂಗ್ರೆಸ್ ಸರ್ಕಾರ ದ್ರೋಹ ಮಾಡುತ್ತಿದೆ, ಇದ್ದ ನೀರನ್ನೆಲ್ಲ ನೆರೆ ರಾಜ್ಯಕ್ಕೆ ರೈತರ ಬದುಕನ್ನು ಸರ್ವನಾಶ ಮಾಡಿ ಇದೀಗ ಕುಡಿಯಲು ಸಹ ನೀರು ಇಲ್ಲದಂತೆ ಮಾಡುತ್ತಿದೆ ಎಂದು ಆರೋಪಿಸಿದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!