Sports
WCL-2025: ಆಪರೇಷನ್ ಸಿಂಧೂರ ಬಳಿಕ ಭಾರತ-ಪಾಕ್ ಮುಖಾಮುಖಿ
ನವದೆಹಲಿ: ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಲೀಗ್ನ ಎರಡನೇ ಆವೃತ್ತಿ ಶುಕ್ರವಾರ(ಜು. 18 ) ಪ್ರಾರಂಭವಾಗಿದ್ದು, ಲೀಗ್ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಚಾಂಪಿಯನ್ ತಂಡವನ್ನು ಪಾಕಿಸ್ತಾನ ಚಾಂಪಿಯನ್ ತಂಡ ಸೋಲಿಸಿದೆ. ಆದರೆ ನಾಳೆ(ಜು.20) ಕಳೆದ ಆವೃತ್ತಿಯ ಚಾಂಪಿಯನ್ ಆಗಿದ್ದ ಭಾರತ ಚಾಂಪಿಯನ್ಸ್ ತಂಡವನ್ನು ಪಾಕಿಸ್ತಾನ ತಂಡ ಆಪರೇಷನ್ ಸಿಂಧೂರದ ನಂತರ ಪ್ರಥಮ ಬಾರಿಗೆ ಮುಖಾಮುಖಿಯಾಗಲಿವೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯವೂ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಭಾರತದ ಸಮಯದ ಪ್ರಕಾರ ರಾತ್ರಿ 9:00 ಗಂಟೆಗೆ ನಡೆಯಲಿದೆ.

ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಪ್ರಸಾರವಾಗಲಿದೆ.
ಭಾರತ ಚಾಂಪಿಯನ್ ತಂಡದಲ್ಲಿ ಯಾರೆಲ್ಲಾ ಆಡಲಿದ್ದಾರೆ?
ಯುವರಾಜ್ ಸಿಂಗ್, ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಪಿಯೂಷ್ ಚಾವ್ಲಾ, ಸ್ಟುವರ್ಟ್ ಬಿನ್ನಿ, ವರುಣ್ ಆರೋನ್, ವಿನಯ್ ಕುಮಾರ್, ಅಭಿಮನ್ಯು ಮಿಥುನ್, ಸಿದ್ಧಾರ್ಥ್ ಕೌಲ್, ಗುರುಕೀರತ್ ಮಾನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಪಾಕಿಸ್ತಾನ ಚಾಂಪಿಯನ್ ಯಾರೆಲ್ಲಾ ಆಡಲಿದ್ದಾರೆ?
ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಸರ್ಫರಾಜ್ ಅಹ್ಮದ್, ಶಾರ್ಜೀಲ್ ಖಾನ್, ವಹಾಬ್ ರಿಯಾಜ್, ಆಸಿಫ್ ಅಲಿ, ಶಾಹಿದ್ ಅಫ್ರಿದಿ, ಕಮ್ರಾನ್ ಅಕ್ಮಲ್, ಅಮೇರ್ ಯಾಮಿನ್, ಸೊಹೈಲ್ ಖಾನ್, ಸೊಹೈಲ್ ತನ್ವೀರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
National
ವೈಭವ್ ಸೂರ್ಯವಂಶಿಯೇ ಈ ಸೀಸನ್‌ನ ಅಸಲಿ ಹೀರೋ ಎಂದ ಗವಾಸ್ಕರ್
National - International
INDW vs ENGW T-20: ಇಂದು ಬ್ರಿಸ್ಟಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 2ನೇ ಟಿ-20 ಸರಣಿ ಆಡಲಿರುವ ಭಾರತ ತಂಡ
ಬ್ರಿಸ್ಟಲ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡವು 3 ಪಂದ್ಯಗಳ T20 ಸರಣಿಯ ಮೊದಲ ಪಂದ್ಯವನ್ನು ಗೆದ್ದು 1-0 ಮುನ್ನಡೆ ಸಾಧಿಸಿದೆ.
ಇದೀಗ ಸರಣಿಯ 2ನೇ ಟಿ20 ಪಂದ್ಯ ಇಂದು (ಮೇ 30) ಬ್ರಿಸ್ಟಲ್‌ನ ಕೌಂಟಿ ಮೈದಾನದಲ್ಲಿ ನಡೆಯಲಿದೆ. ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಈ ಪಂದ್ಯವನ್ನು ಗೆದ್ದರೆ ಭಾರತ ಸರಣಿಯನ್ನು 2-0 ಅಂತರದಲ್ಲಿ ಕೈವಶ ಮಾಡಿಕೊಳ್ಳುವ ಅವಕಾಶ ಹೊಂದಿದೆ.

ಟಿ-20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಇಂಗ್ಲೆಂಡ್ ಮತ್ತು ಭಾರತ ಮಹಿಳಾ ತಂಡದ ನಡುವಿನ 2ನೇ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ತಂಡಗಳಲ್ಲಿ ಯಾರೆಲ್ಲಾ ಇದ್ದಾರೆ?
ಭಾರತ ಮಹಿಳಾ ಕ್ರಿಕೆಟ್ ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೀ ಚರಣಿ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಂದನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ಕ್ರಾಂತಿ ಗೌಡ್, ಶ್ರೇಯಾಂಕ ಪಾಟೀಲ್, ರಾಧಾ ಯಾದವ್.

ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ: ಎಮ್ ಅರ್ಲಾಟ್, ಟ್ಯಾಮಿ ಬ್ಯೂಮಾಂಟ್, ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಚಾರ್ಲಿ ಡೀನ್, ಸೋಫಿಯಾ ಡಂಕ್ಲೆ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫೈಲರ್, ಆಮಿ ಜೋನ್ಸ್, ನ್ಯಾಟ್ ಸಿವರ್-ಬ್ರಂಟ್, ಪೈಗೆ ಸ್ಕೋಲ್ಫೀಲ್ಡ್, ಲಿನ್ಸೆ ಸ್ಮಿತ್, ಡ್ಯಾನಿ ವ್ಯಾಟ್-ಹಾಡ್ಜ್, ಇಸ್ಸಿ ವಾಂಗ್.
National - International
ಇಂದಿನಿಂದ ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ಟಿ-20 ಸರಣಿ ಆರಂಭ
ಚೆಲ್ಮ್ಸ್‌ಫೋರ್ಡ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡವು ಮುಂಬರುವ ಮಹಿಳಾ ಟಿ20 ವಿಶ್ವಕಪ್‌ಗೆ ಸಿದ್ಧತೆಗಾಗಿ ಮಹತ್ವದ ಸರಣಿಯನ್ನು ಆಡಲು ಸಜ್ಜಾಗಿದೆ.
ಭಾರತ ಮಹಿಳಾ ಕ್ರಿಕೆಟ್ ತಂಡ ಹಾಗೂ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ನಡುವೆ 4 ಪಂದ್ಯಗಳ ಟಿ20 ಸರಣಿ ಮತ್ತು ಒಂದು ಟೆಸ್ಟ್ ಪಂದ್ಯ ನಡೆಯಲಿದೆ. ಸರಣಿಯ ಮೊದಲ ಟಿ20 ಪಂದ್ಯ ಮೇ 28 (ಗುರುವಾರ) ಇಂಗ್ಲೆಂಡ್‌ನ ಚೆಲ್ಮ್ಸ್‌ಫೋರ್ಡ್‌ನ ಕೌಂಟಿ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಪಂದ್ಯ ಆರಂಭವಾಗಲಿದೆ.
ಭಾರತ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸುತ್ತಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಇಂಗ್ಲೆಂಡ್ ತಂಡದ ನಾಯಕತ್ವವನ್ನು ಚಾರ್ಲೆಟ್ ಡೀನ್ ವಹಿಸಿದ್ದಾರೆ. ಈ ಸರಣಿ ಟಿ20 ವಿಶ್ವಕಪ್‌ಗೆ ಮುನ್ನ ಉಭಯ ತಂಡಗಳಿಗೂ ತಮ್ಮ ಸಿದ್ಧತೆಯನ್ನು ಪರೀಕ್ಷಿಸಿಕೊಳ್ಳುವ ಪ್ರಮುಖ ಅವಕಾಶವಾಗಿದೆ.
ಹೆಡ್-ಟು-ಹೆಡ್ ದಾಖಲೆಯಲ್ಲಿ ಇಂಗ್ಲೆಂಡ್ ಮೇಲುಗೈ ಸಾಧಿಸಿದ್ದು, ಒಟ್ಟು 35 ಟಿ20 ಪಂದ್ಯಗಳಲ್ಲಿ 24 ಗೆಲುವು ಸಾಧಿಸಿದೆ. ಭಾರತ 11 ಪಂದ್ಯಗಳಲ್ಲಿ ಜಯ ಪಡೆದಿದೆ. ಆದಾಗ್ಯೂ, ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದ ಯಶಸ್ಸು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ಪಂದ್ಯಗಳ ನೇರ ಪ್ರಸಾರವನ್ನು Sony Sports Network ಚಾನೆಲ್‌ಗಳಲ್ಲಿ ಹಾಗೂ SonyLIV ಆಪ್‌ನಲ್ಲಿ ವೀಕ್ಷಿಸಬಹುದು.
-
Special13 hours agoಕೇವಲ ₹16,500ಕ್ಕೆ ಅಯೋಧ್ಯೆ–ಕಾಶಿ–ಪುರಿ ಯಾತ್ರೆ: ಐಆರ್ಸಿಟಿಸಿಯಿಂದ 10 ದಿನಗಳ ವಿಶೇಷ ಪ್ಯಾಕೇಜ್!!
-
Chikmagalur13 hours agoಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ಅಧಿಕಾರಿಗಳಿಗೆ ‘ಇಸ್ಪೀಟ್ ಕಾರ್ಡ್’ ವಿತರಣೆ
-
Hassan12 hours agoಡಿಸಿಸಿ ಬ್ಯಾಂಕ್ ನೇಮಕಾತಿ ಹೆಸರಲ್ಲಿ ವಂಚನೆ ಆರೋಪ: ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಿಲ್ಲ ಎಂದು ಅಧ್ಯಕ್ಷ ನಾಗರಾಜ್ ಸ್ಪಷ್ಟನೆ:
-
Kodagu10 hours agoಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ತೊರೇರ ಪೊನ್ನಕ್ಕಿ ಆಯ್ಕೆ:
-
Politics2 hours agoಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ
-
State3 hours agoರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ
-
Politics7 hours agoರಾಜ್ಯದ ನೂತನ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್
-
Chikmagalur4 hours agoನ್ಯೂ ವೈಬ್ರೆಂಟ್ ಕಾಲೇಜಿಗೆ ಹೆಮ್ಮೆ: ಜೆಇಇ ಅಡ್ವಾನ್ಸ್ಡ್ 2026ರಲ್ಲಿ ವಿದ್ಯಾರ್ಥಿಗಳ ಭರ್ಜರಿ ಸಾಧನೆ: ಧನುಷ್ ಗುತ್ತಿಗೆ ದೇಶದಲ್ಲಿ 95ನೇ ರ್ಯಾಂಕ್

