Chikmagalur
ವೈಲ್ಡ್ ಲೈಫ್ ಆಕ್ಟ್ ಅಡಿಯಲ್ಲಿ ಶಾಖಾದ್ರಿ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ದತ್ತಪೀಠದ ಶಾಖಾದ್ರಿ ಹುಲಿ ಚರ್ಮದ ಮೇಲೆ ಕುಳಿತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಶುಕ್ರವಾರ ಅರಣ್ಯ ಇಲಾಖೆಯ ಅಧಿಕಾರಿಗಳು ನಗರದ ಮಾರ್ಕೆಟ್ ರಸ್ತೆಯಲ್ಲಿನ ಅವರ ನಿವಾಸಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಮನೆಯಲ್ಲಿ ಒಂದು ಚಿರತೆ ಹಾಗೂ ಒಂದು ಜಿಂಕೆ ಚರ್ಮ ಪತ್ತೆಯಾಗಿದೆ.
ಶುಕ್ರವಾರ ರಾತ್ರಿ ಚಿರತೆ ಹಾಗೂ ಜಿಂಕೆ ಎರಡು ಪ್ರಾಣಿಯ ಚರ್ಮವನ್ನ ವಶಕ್ಕೆ ಪಡೆದಿದ್ದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಮಗಳೂರು ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ವೈಲ್ಡ್ ಲೈಫ್ ಆಕ್ಟ್ ನಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಎರಡು ಪ್ರಾಣಿಯ ಚರ್ಮವನ್ನ ಎಫ್.ಎಸ್.ಎಲ್. ವರದಿಗೆ ಕಳುಹಿಸಲಿದ್ದಾರೆ.
Chikmagalur
ವಿಜೃಂಭಣೆಯಿಂದ ನಡೆದ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ರಥೋತ್ಸವ

ಜಯಪುರ : ಗುಡ್ಡೆತೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಕ್ಷಿಣ ತಿರುಪತಿ ಎಂದೇ ಖ್ಯಾತಿಯಾಗಿರುವ ಮೇಗೂರು ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದ ರಥೋತ್ಸವವು ಫೆಬ್ರವರಿ 15 ಶನಿವಾರ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಲಕ್ಷ್ಮೀ ನರಸಿಂಹಮೂರ್ತಿ ಭಟ್ಟರು, ನವೀನ್ ನಾಗೇಂದ್ರ ಭಟ್ಟರು, ದೇವಸ್ಥಾನದ ಧರ್ಮದರ್ಶಿಗಳಾದ ರಘುಪತಿ ಹೆಬ್ಬಾರ್, ಸಮಿತಿಯ ಅಧ್ಯಕ್ಷರಾದ ಟಿ ಪ್ರಕಾಶ್, ಕೊಪ್ಪ ತಾಲೂಕು ತಹಸೀಲ್ದಾರರಾದ ಲಿಖಿತ ಮೋಹನ್, ಶಿರಸ್ತದಾರ್ ನಾಗರಾಜ್, ರವಿನ್ಯು ಇನ್ಸ್ಪೆಕ್ಟರ್ ವಿನಯ್ ಹಾಗೂ ಸುತ್ತಮುತ್ತಲಿನ ಸಹಸ್ರರು ಭಕ್ತಾದಿಗಳು ಭಾಗಿಯಾಗಿದ್ದರು.
ವರದಿ :- ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
Chikmagalur
ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್

ಚಿಕ್ಕಮಗಳೂರು: ಫೆ. ೧೫: ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು ಎಂದು ನಗರ ಸಭೆ ಅಧ್ಯಕ್ಷ್ಷೆ ಸುಜಾತ ಶಿವಕುಮಾರ್ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂತ ಸೇವಾಲಾಲರು ಈಗಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ ಜನಿಸಿದರು. ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನ ಪಡೆದಿದ್ದಾರೆ, ಜೀವನದುದ್ದಕ್ಕೂ ಬ್ರಹ್ಮಚಾರಿಯಾಗಿಯೇ ಉಳಿದವರು ಎಂದ ಅವರು ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದ ಮಹಾಪುರುಷ ಎಂದು ಹೇಳಿದರು.
ಬೇಲೂರು ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಕೆ. ಶ್ರೀನಿವಾಸ್ ಉಪನ್ಯಾಸ ನೀಡಿ ಮಾನವ ಜನ್ಮ ಪವಿತ್ರವಾದದ್ದು, ಇದನ್ನು ಹಾಳು ಮಾಡಿಕೊಳ್ಳಬಾರದು, ವ್ಯಸನಗಳಿಂದ ದೂರವಿರಬೇಕು. ಹರಿಷಡ್ ವರ್ಗಗಳನ್ನು ಸುಟ್ಟು ಹಾಕಿ ಪ್ರಾಮಾಣಿಕರಾಗಿ ಜೀವಿಸಿ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂದು ಸಾರಿದವರು ಸಂತ ಸೇವಾ ಲಾಲ್. ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರಿಗೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರಲ್ಲದೆ ಸೇವಾಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಿಸಲು ಪ್ರೇರೇಪಿಸಿದರು ಎಂದರು.
ಮಹಾನೀಯರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನಡೆದಾಗ ಮಾತ್ರ ನಾವು ಇತರರಿಗೆ ಮಾದರಿಯಾಗಲು ಸಾಧ್ಯ, ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ, ಜನದಂಬೆಯ ಆರಾಧಕರಾಗಿ ಇಡೀ ಜೀವಮಾನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾಲರು, ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ. ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದಾರೆ. ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಮತ್ತು ಗ್ರಾಮೀಣ ಜೀವನಗಳಿಂದ ದೂರವಿದ್ದು, ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಇವರಲ್ಲಿನ ಅಜ್ಞಾನ ಅಂಧಕಾರಗಳನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದ ಸೇವಾಲಾಲರನ್ನು ಬಂಜಾರರು ಮೋತಿವಾಳು ಅಥವಾ ಲಾಲ ಮೋತಿ ಎಂದು ಕರೆಯುತ್ತಿದ್ದರು. ಮುಂಬೈಯ ಸ್ಮಿತ್ ಭಾವುಚಾ ಎಂಬಲ್ಲಿ ಪೋರ್ಚುಗೀಸರ ಹಡಗು ಸಿಕ್ಕಿಹಾಕಿಕೊಂಡಾಗ ಅದನ್ನು ತಮ್ಮ ಜಾಣತನದಿಂದ ದಡ ಸೇರಿಸಿದ ಸೇವಾಲಾಲರಿಗೆ ಪೋರ್ಚುಗೀಸರು ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಆದ್ದರಿಂದಲೇ ಇವರನ್ನು ಮೋತಿವಾಳೋ ಎಂದು ಕರೆಯುತ್ತಿದ್ದರು ಎಂದು ಹೇಳಿದರು
ಉಪತಹಶಿಲ್ದಾರ್ ರಾಮ್ ರಾವ್ ದೇಸಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸೇವಾಲಾಲ್ ಒಬ್ಬ ದನಕಾಯುವ ಗೋಪಾಲಕನಾಗಿ ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದವರು ಎಂದು ತಿಳಿಸಿದರು.
ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರು. ಸೇವಾ ಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೇಪಿಸಿದರು. ತನ್ನ ಸಮಾಜದ ಜನರ ಕಷ್ಟಕ್ಕಾಗಿ ತಮ್ಮ ಪ್ರಾಣಾರ್ಪಣೆಗೂ ಸಿದ್ದರಾಗಿದ್ದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್,ಎಲ್ಲರನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಲಲಿತಾ ರವಿನಾಯ್ಕ್, ಸಂತ ನೇವಾಲಾಲ್ ಬಂಜಾರ ಅಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ್ ನಾಯ್ಕ್, ಶ್ರೀ ರಾಮ್ ನಾಯ್ಕ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಸಮಿತಿ ಸದಸ್ಯ ಲಕ್ಷ್ಮಣ್ ಹೆಚ್,ಎಸ್,ಬಂಜಾರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
Chikmagalur
ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜು ಪುಡಿಪುಡಿ

ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಲ್ಲುತೂರಾಟ ನಡೆಸಿರುವ ಘಟನೆ ನಗರದ ವಿಜಯಪುರ ಬಡಾವಣೆಯಲ್ಲಿ ಕಳೆದ ರಾತ್ರಿ ನಡೆದಿದೆ. ಕಿಡಿಗೇಡಿಗಳ ಗುಂಪೊಂದು ತಡರಾತ್ರಿ ಮಹೇಶ್ ಎಂಬುವವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದೆ. ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.
ಕಲ್ಲು ತೂರಾಟ ನಡೆಸಿ, ಘೋಷಣೆಗಳನ್ನು ಕೂಗಿ ಯುವಕರು ಎಸ್ಕೆಪ್ ಆಗಿದ್ದಾರೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಸವನಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಗಳೂಎರು ಎಸ್ ಪಿ ವಿಕ್ರಂ ಅಮಟೆ ಆಯ್ಕೆ, ರಾತ್ರಿ ಮನೆಯೊಂದರ ಮೇಲೆ ಕಿಡಿಗೇಡುಗಳು ಕಲ್ಲು ತೂರಾಟ ನಡೆಸಿ, ಪರಾರಿಯಾಗಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
-
Mysore10 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu13 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Kodagu10 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Mandya10 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Mandya12 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Mysore10 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Kodagu11 hours ago
ಮೃ*ತರ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ ಮಂತರ್ ಗೌಡ
-
Hassan13 hours ago
ರಾಜ್ಯದಲ್ಲಿ ಕ್ಷುಲ್ಲಕ ರಾಜಕಾರಣಕ್ಕೆ ಪ್ರಾಶಸ್ತ್ಯ ಕೊಡುತ್ತಿದ್ದಾರೆ: ಎಚ್ಡಿಕೆ