Kodagu
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರೂರು ಗ್ರಾಮದ ಲೈನ್ ಮನೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆಯಾಗಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
ಬಲ್ಲಮಾವಟಿ ಪೇರೂರು ಗ್ರಾಮದ ತೋಳಂಡ ಪೂಣಚ್ಚ ಎಂಬುವವರ ಲೈನ್ ಮನೆಯಲ್ಲಿ ಶನಿವಾರ ರಾತ್ರಿ (ದಿನಾಂಕ:15/03/2025/ 8.ಗಂಟೆಗೆ )ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ಬಿಟ್ಟುಪರಾರಿ ಯಾಗಿದ್ದಾಳೆ.
ಜನರು ವಾಸವಿಲ್ಲದ ಲೈನ್ ಮನೆಯಲ್ಲಿ ಮಗುವಿನ ಕೂಗು ಕೇಳಿದ ಸ್ಥಳೀಯರು ಮನೆ ಮಾಲೀಕ ಪೂಣಚ್ಚ ಎಂಬುವರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದ ಮಾಲಿಕ ಪೂಣಚ್ಚ ಎಂಬುವವರು ಮಗುವಿನ ಬಳಿ ಯಾರು ಇಲ್ಲದಿರುವುದನ್ನು ಕಂಡು 112 ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ
ಸ್ಥಳಕ್ಕೆ ಧಾವಿಸಿದ 112 ಸಿಬ್ಬಂದಿಗಳಾದ ಮುಖ್ಯಪೇದೆ ರಾಜೇಶ್, ಮತ್ತು ಮೊಣ್ಣಪ್ಪ ರವರು ಮಗುವನ್ನು ರಕ್ಷಿಸಿ ನಾಪೋಕ್ಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಆಂಬುಲೆನ್ಸಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ರಕ್ತದ ಮಡುವಿನಲ್ಲಿ ಇರುವೆಗಳೊಂದಿಗೆ ಜೀವ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಮಗುವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆ ಸಂಬಂಧ ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಗುವಿನ ಅರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Kodagu
ದೇಶದ ಯುವಜನತೆಯು ಸಂಘಟಿತರಾಗಿ ಕೈ ಜೋಡಿಸಿದಾಗ ಮಾತ್ರ ವ್ಯಸನ ಮುಕ್ತ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ: ಡಾ. ಜ಼ಮೀರ್ ಅಹಮದ್
ಕುಶಾಲನಗರ: ದೇಶದ ಯುವಜನತೆಯು ಸಂಘಟಿತರಾಗಿ ಕೈ ಜೋಡಿಸಿದಾಗ ಮಾತ್ರ ವ್ಯಸನ ಮುಕ್ತ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಜ಼ಮೀರ್ ಅಹಮದ್ ಅಭಿಪ್ರಾಯಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಇವರ ವತಿಯಿಂದ ಶ್ರೀ ಸದ್ಗುರು ಪ್ರೌಢಶಾಲೆ, ಕೂಡಿಗೆ ಇಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು, ಮಾನವೀಯ ಮೌಲ್ಯ, ಸಂಸ್ಕಾರ, ಸನ್ನಡತೆ, ಸಮಾಜದಲ್ಲಿ ಉತ್ತಮ ಗೌರವವನ್ನು ತಂದುಕೊಡುತ್ತದೆ. ಯಾವುದೇ ವ್ಯಕ್ತಿ ವ್ಯಸನಗಳಿಗೆ ಬಲಿಯಾದರೆ ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಸ್ಥಿಮಿತತೆ ಕಳೆದುಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ವಿದ್ಯಾರ್ಥಿ ಸಮುದಾಯವು ಮಾದಕ ಪದಾರ್ಥಗಳ ದಾಸ್ಯಕ್ಕೊಳಗಾಗಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬಾರದು. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ, ಸುಲಭದಲ್ಲಿ ಅದರಿಂದ ಹೊರಬರಲು ಸಾಧ್ಯವಿಲ್ಲ.

ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜವು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕ್ಷಣಿಕ ಸುಖಕ್ಕೆ ಬದುಕನ್ನು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರದಿಂದಿದ್ದು ದೇಶದ ಸನ್ನಡತೆಯ ನಾಗರೀಕರಾಗಿ ಬದುಕು ನಡೆಸಬೇಕು. ಮಾದಕ ವಸ್ತುಗಳ ಜಾಲಕ್ಕೆ ಯುವ ಜನರು ಬಲಿಯಾಗದಂತೆ ಎಚ್ಚರ ವಹಿಸಲು ಜಾಗೃತಿ ಕಾರ್‍ಯಕ್ರಮಗಳನ್ನು ಕಾಲಕಾಲಕ್ಕೆ ರೂಪಿಸುತ್ತಿರಬೇಕು. ಯಾವುದೇ ರೀತಿಯ ದುಶ್ಚಟಗಳನ್ನು ತ್ಯಜಿಸುವಂತೆ ಜನಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ನುಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಪುಷ್ಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯುವ ಸಮುದಾಯದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಮಾದಕ ವಸ್ತುವನ್ನು ದೂರ ಸರಿಸಿ ಉನ್ನತ ಶಿಕ್ಷಣ ಹಾಗೂ ಸದೃಢ ಭವಿಷ್ಯ ರೂಪಿಸಲು ಒತ್ತು ನೀಡಬೇಕು. ವ್ಯಸನದ ದುಷ್ಪರಿಣಾಮಗಳ ಬಗ್ಗೆ ಸಮಾಜಕ್ಕೆ ನೈಜ ಅರಿವು ಮೂಡಿಸಲು ಸಾಧ್ಯವಾದಲ್ಲಿ ಮಾದಕ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಚ್ಯುತ್, ಸುಮಲತಾ, ರೇಣುಕಾ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kodagu
ಮಡಿಕೇರಿ – ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಮಡಿಕೇರಿ : ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ಕಚೇರಿಯಲ್ಲಿ ಹೊಸದಾಗಿ ಸೃಜಿಸಿರುವ ರಕ್ಷಣಾಧಿಕಾರಿ (ಅಸಾಂಸ್ಥಿಕ) ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೋಶಿಯಲ್ ವರ್ಕ್, ಸೋಶಿಯಾಲಾಜಿ ಮನಃಶಾಸ್ತ್ರ, ಸಮುದಾಯ ಅಭಿವೃದ್ಧಿ ಮಹಿಳಾ ಅಧ್ಯಯನ, ಗೃಹ ವಿಜ್ಞಾನ ಇವುಗಳಲ್ಲಿ ಯಾವುದಾದರೊಂದರಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಕಂಪ್ಯೂಟರ್ ಜ್ಞಾನ ಇರಬೇಕು. ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಅನುಭವದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗೌರವ ಧನ ರೂ.27,804 ಆಗಿರುತ್ತದೆ. ಇಚ್ಛೆಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ ವಿವರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳ ನಕಲುಗಳೊಂದಿಗೆ ಅರ್ಜಿಯನ್ನು ಫೆಬ್ರವರಿ, 13 ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ, ಕೊಡಗು ಜಿಲ್ಲೆ(ದೂ.ಸಂ.08272-228800) ಈ ವಿಳಾಸಕ್ಕೆ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ಕೋರಿದ್ದಾರೆ.
Kodagu
ಫೆ.7ಕ್ಕೆ ನಶಾ ಮುಕ್ತ ಭಾರತ ಜಾಗೃತಿ ಅಭಿಯಾನ ಸಹಕಾರಕ್ಕೆ ಡಾ.ಲೋಕೇಶ್ ಮನವಿ
ಮಡಿಕೇರಿ : ಜಿಲ್ಲಾಡಳಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ದಿಶಾ ಭೋದ್ ಫೌಂಡೇಶನ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿದ್ಯವಿದ್ಯಾನಿಲಯ ಸೇರಿದಂತೆ ಕಾಲೇಜುಗಳ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಶಾ ಮುಕ್ತ ಭಾರತ-ಸ್ವಾಸ್ಥ್ಯ ಭಾರತ ಹಾಗೂ ಅಂಗಾಂಗ ದಾನ ಅಭಿಯಾನ(ಜೀವ ಸಾರ್ಥಕತೆ ಅಭಿಯಾನ) ಮತ್ತು ಜಾಥ ಕಾರ್ಯಕ್ರಮವು ಫೆಬ್ರವರಿ, 07 ರಂದು ಮಡಿಕೇರಿ ನಗರದಲ್ಲಿ ನಡೆಯಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್ ಅವರು ತಿಳಿಸಿದ್ದಾರೆ.

ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಫೆ.7 ರಂದು ಬೆಳಗ್ಗೆ 7 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಜಾಥ ಹೊರಡಲಿದ್ದು, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಅಜ್ಜಮಾಡ ಬಿ.ದೇವಯ್ಯ ವೃತ್ತದ ಮೂಲಕ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲಿದೆ. ಈ ಸಂದರ್ಭದಲ್ಲಿ ಬೀದಿನಾಟಕ ಪ್ರದರ್ಶನ ನಡೆಸಿ, ನಶಾ ಮುಕ್ತ ಭಾರತ ನಿರ್ಮಾಣ ಮಾಡುವಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಲೋಕೇಶ್ ಅವರು ವಿವರಿಸಿದರು.
ನಶಾ ಮುಕ್ತ ಭಾರತ ಸಂಬಂಧ ಹೆಚ್ಚಿನ ಅರಿವು ಮೂಡಿಸುವಲ್ಲಿ ಪ್ಲೇ ಕಾರ್ಡ್ ಪ್ರದರ್ಶನ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಾ.ಲೋಕೇಶ್ ಅವರು ಹೇಳಿದರು.

ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಕೆಟ್ಟ ಪರಿಣಾಮ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಆ ದಿಸೆಯಲ್ಲಿ ಅಭಿಯಾನದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳು, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಸ್ಥಾನೀಕ ವೈದ್ಯಾಧಿಕಾರಿ ಡಾ.ಧನಂಜಯ ಅವರು ಮಾತನಾಡಿ ಅಂಗಾಂಗ ದಾನ ಮಹತ್ವದ ಕುರಿತು ಜಾಗೃತಿ ಅಭಿಯಾನವನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಅಂಗಾಂಗ ದಾನ ಮಾಡುವುದರಿಂದ ಇತರರ ಜೀವವನ್ನು ಉಳಿಸಬಹುದಾಗಿದೆ. ಆ ನಿಟ್ಟಿನಲ್ಲಿ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ ಎಂದರು.
ಡಾ.ಮೋಹನ್ ಅಪ್ಪಾಜಿ ಅವರು ಮಾತನಾಡಿ ನಶಾ ಮುಕ್ತ ಭಾರತ-ಸ್ವಾಸ್ಥ್ಯ ಭಾರತ, ಅಂಗಾಂಗ ದಾನ ಅಭಿಯಾನದಲ್ಲಿ ಲಯನ್ಸ್ ಸಂಸ್ಥೆ, ಸಂಸ್ಕøತಿ ಸಿರಿ ಬಳಗ, ರಾಮೋತ್ಸವ, ಮುತ್ತಪ್ಪ ದೇವಾಲಯ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಲಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ ಸಾರ್ವಜನಿಕರಿಗೆ ಅರಿವು ಮೂಡಿಸುವ ದಿಸೆಯಲ್ಲಿ ಫೆಬ್ರವರಿ, 15 ರವರೆಗೆ ವಿವಿಧ ಶಾಲಾ, ಕಾಲೇಜು ಹಂತದಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಮಾದಕ ವಸ್ತುಗಳನ್ನು ತೆಗೆದುಕೊಂಡಲ್ಲಿ ಯಾವ ಯಾವ ಕಾಯಿಲೆಗಳು ಬರುತ್ತವೆ ಎಂಬ ಬಗ್ಗೆ ಎಚ್ಚರಿಕೆ ನೀಡಲಾಗುತ್ತದೆ. ಮಾದಕ ವಸ್ತುಗಳಿಂದ ದೂರವಿರುವಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಮಾದಕ ವಸ್ತು ತೆಗೆದುಕೊಳ್ಳುವುದರಿಂದ ಅವರ ಆರೋಗ್ಯದ ಹಾಗೂ ಕುಟುಂಬದ ಮೇಲಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಾ.ಸತೀಶ್ ಕುಮಾರ್ ಅವರು ನುಡಿದರು.
ವೈದ್ಯಕೀಯ ಅಧೀಕ್ಷಕರಾದ ಡಾ.ಸೋಮಶೇಖರ್ ಅವರು ಮಾತನಾಡಿ ಅಂಗಾಂಗ ದಾನವನ್ನು ಸ್ವಯಂ ಪ್ರೇರಣೆಯಿಂದ ಮಾಡಲು ಮುಂದಾಗಬೇಕು. ಅಂಗಾಂಗ ದಾನ ಮಾಡುವುದರಿಂದ ಮತ್ತೊಬ್ಬರ ಅಮೂಲ್ಯ ಜೀವ ಉಳಿಸಿದಂತಾಗುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ ಅವರು ಮಾತನಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಡಾ.ಅಭಿನಂದನ್, ಡಾ.ಸುಮುಖ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಇತರರು ಇದ್ದರು.
-
Politics10 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Kodagu16 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu16 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
Hassan8 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
Hassan13 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
National12 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Chamarajanagar12 hours agoಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
-
Mysore12 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
