Connect with us

Chamarajanagar

ಮಹಿಳೆ ಕಾಣೆ : ಸುಳಿವಿಗೆ ಸಹಕರಿಸಲು ಮನವಿ

Published

on

ಚಾಮರಾಜನಗರ: ಜಿಲ್ಲೆಯ  ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದ ಜಯಶೀಲ ಎಂಬ ಮಹಿಳೆ ಕಾಣೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.

27 ವರ್ಷದ ಜಯಶೀಲ 5 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಸುಳಿವು ದೊರೆತಲ್ಲಿ ಬೇಗೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Continue Reading

Chamarajanagar

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ

Published

on

ಗುಂಡ್ಲುಪೇಟೆ: ಬರಗಾಲದ ಸಮರ್ಪಕ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆ ಪರಿಹಾರ ಸೇರಿದಂತೆ ವಿವಿಧ ರೈತಪರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.

ಪಟ್ಟಣದ ದೇವರಾಜು ಅರಸು ಕ್ರೀಡಾಂಗಣದಲ್ಲಿ ಜಮಾವಣೆಗೊಂಡ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಟ್ಯಾಕ್ಟರ್ ರ್ಯಾಲಿ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ತಾಲೂಕು ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ 46ನೇ ರೈತ ಹುತಾತ್ಮ ದಿನದ ಅಂಗವಾಗಿ ಹುತಾತ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಾತನಾಡಿ, ತಾಲೂಕಿನ ಅಭಿವೃದ್ಧಿಗೆ 475 ಕೋಟಿ ರೂ. ಅನುದಾ‌ನ ತಂದಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ತಂದು ಕೆಲಸ ಮಾಡುತ್ತೇನೆ. ತಾಲೂಕಿನ ಕೆರೆಗಳಿಗೆ ಹಂತ ಹಂತವಾಗಿ ನೀರು ತುಂಬಿಸಲಾಗುತ್ತಿದೆ. ರೈತರ ಜೊತೆ ಯಾವಾಗಲೂ ನಾನು ಇರುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಮಳೆಯಿಲ್ಲದೇ ರೈತರ ಫಸಲು ನಾಶವಾಗಿದೆ‌. ಅಂತರ್ಜಲ ಕುಸಿತದಿಂದ ಬೋರ್‌ವೆಲ್‌ಗಳಲ್ಲೂ ನೀರು ಬತ್ತಿದೆ. ನೀರಿನ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ಜಾನುವಾರುಗಳಿಗೆ ಮೇವು ಇಲ್ಲದೇ ರೈತರು ಪರದಾಡುವಂತಾಗಿದೆ. ಸರ್ಕಾರ ಕೆರೆಗಳಿಗೆ ನೀರು ತುಂಬಿಸಬೇಕು. ಸರ್ಕಾರ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದರು.

ರೈತ ಸಂಘಟನೆಗಳು ಸದಾ ರೈತರ ಪರವಾಗಿ ಹೋರಾಟ ನಡೆಸುತ್ತಿವೆ. ರೈತರಿಗೆ ಅನ್ಯಾಯವಾದಾಗ ಸಂಘಟನೆಗಳು ಧ್ವನಿಯಾಗಿದ್ದು, ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯಯುತವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಬೆಳೆ ಹಾಗೂ ಸಾಕುಪ್ರಾಣಿಗಳ ಹಾನಿಗೆ ವೈಜ್ಞಾನಿಕ ಆಧಾರದ ಮೇಲೆ ಶೀಘ್ರ ಪರಿಹಾರ ನೀಡಬೇಕು. ಸೋಲಾರ್ ಬೇಲಿ ಯೋಜನೆಗೆ ಶೇ.90ರಷ್ಟು ಸಬ್ಸಿಡಿ ನೀಡಿ, ಯೋಜನೆಯ ವ್ಯಾಪ್ತಿಯನ್ನು 7 ಕಿ.ಮೀ.ನಿಂದ 10 ಕಿ.ಮೀ.ವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಗೌಡೇಗೌಡ, ನವಲಗುಂದ-ನರಗುಂದ ರೈತರ ಹೋರಾಟದ ಇತಿಹಾಸವನ್ನು ಸ್ಮರಿಸಿ, ನೀರಿನ ಸಮಸ್ಯೆ ಹಾಗೂ ತೆರಿಗೆ ವಿಚಾರವಾಗಿ ನಡೆದ ಹೋರಾಟದ ವೇಳೆ ಪೊಲೀಸ್ ಗೋಲಿಬಾರ್‌ನಲ್ಲಿ ರೈತರು ಪ್ರಾಣ ತ್ಯಾಗ ಮಾಡಿದ್ದು ರೈತ ಚಳುವಳಿಯ ಇತಿಹಾಸದಲ್ಲಿ ಮರೆಯಲಾಗದ ಘಟನೆಯಾಗಿದೆ ಎಂದು ಹೇಳಿದರು.

ಅಂದಿನ ದಿನದಲ್ಲಿ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಆ ಹೋರಾಟ ರಾಜ್ಯಾದ್ಯಂತ ವ್ಯಾಪಿಸಿ, ರೈತರ ಹಕ್ಕುಗಳಿಗಾಗಿ ಅನೇಕರು ಪ್ರಾಣ ತ್ಯಾಗ ಮಾಡಿದ್ದಾರೆ. ಇಂದಿನ ರೈತರೂ ಸರ್ಕಾರದ ರೈತ ವಿರೋಧಿ ನೀತಿಗಳ ಬಗ್ಗೆ ಜಾಗೃತರಾಗಬೇಕು. ರೈತರಿಗೆ ಅನ್ಯಾಯವಾಗುವ ಯಾವುದೇ ಕಾನೂನುಗಳನ್ನು ವಿರೋಧಿಸಿ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಮಡಿಕೇರಿ ಮನು ಸೋಮಯ್ಯ ಮಾತನಾಡಿ, ನವಲಗುಂದ-ನರಗುಂದ ಹುತಾತ್ಮರ ದಿನವು ರೈತರ ಹೋರಾಟದ ಸಂಕೇತವಾಗಿದೆ. ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಸಂವೇದನಾಶೀಲವಾಗಿ ಆಲಿಸಿದ್ದರೆ ಅಂದು ಗೋಲಿಬಾರ್ ನಡೆಯುತ್ತಿರಲಿಲ್ಲ. ಹೋರಾಟಗಾರರು ಹಾಗೂ ರೈತರನ್ನು ಅಧಿಕಾರಿಗಳು ಗೌರವದಿಂದ ಕಾಣಬೇಕು. ಎಲ್ಲ ಹೋರಾಟಗಳು ಗಾಂಧಿ ಮಾರ್ಗದಲ್ಲಿ ಶಾಂತಿಯುತವಾಗಿ ನಡೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಸಹ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಬಿಜೆಪಿ ಮಂಡಲ ಅಧ್ಯಕ್ಷ ಮಹದೇವಪ್ರಸಾದ್, ಜಿಡಿಎಲ್ ಸುರೇಶ್, ಮೈಸೂರು ಜಿಲ್ಲಾಧ್ಯಕ್ಷ ಸರಗೂರು ನಟರಾಜು, ರೈತ ಸಂಘದ ತಾಲೂಕು ಅಧ್ಯಕ್ಷ ಹಂಗಳ ದಿಲೀಪ್, ಮಾಧು, ಲೋಕೇಶ್, ಮಹದೇವಪ್ರಸಾದ್, ಕುಮಾರಸ್ವಾಮಿ, ಶಿವಮಲ್ಲು, ರತ್ನಮ್ಮ, ಸೌಮ್ಯ, ಮಹದೇವನಾಯಕ, ಶಿವಮಲ್ಲು, ಚೆನ್ನನಾಯಕ, ಅಣ್ಣಯ್ಯ ಆಚಾರ್, ಕೆ.ಸಿ. ಪರಮೇಶ್ವರ್, ಅಮ್ಜಾದ್ ಖಾನ್, ಮುತ್ತುಲಕ್ಷ್ಮಿ ಸೇರಿದಂತೆ ರೈತ ಪದಾಧಿಕಾರಿಗಳು ಭಾಗವಹಿಸಿದ್ದರು.

Continue Reading

Chamarajanagar

ಪುರಸಭೆ ತ್ವರಿತ ಕ್ರಮಕ್ಕೆ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಅಭಿನಂದನೆ

Published

on

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿರುವ ಕಲ್ಯಾಣಿ ಕೊಳದ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದ ನೀರಿನ ನಲ್ಲಿಗಳ ದುರಾವಸ್ಥೆ ಕುರಿತು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ನೂತನ ನೀರಿನ ತೊಟ್ಟಿ ನಿರ್ಮಿಸಿ, ಹಾಳಾಗಿದ್ದ ನಲ್ಲಿಗಳನ್ನು ದುರಸ್ತಿಗೊಳಿಸಿರುವ ಪುರಸಭೆ ಅಧಿಕಾರಿಗಳ ಕ್ರಮವನ್ನು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಅಭಿನಂದಿಸಿದೆ.

ವೇದಿಕೆಯ ವತಿಯಿಂದ ಸುಮಾರು ಎಂಟು ದಿನಗಳ ಹಿಂದೆ ಪುರಸಭೆ ಮುಖ್ಯಾಧಿಕಾರಿ ಶರವಣ ಅವರಿಗೆ ಮನವಿ ಸಲ್ಲಿಸಿ, ದೇವಸ್ಥಾನದ ಮುಂಭಾಗದಲ್ಲಿದ್ದ ನೀರಿನ ನಲ್ಲಿಗಳು ಹಾಳಾಗಿದ್ದರಿಂದ ಸಾಕಷ್ಟು ಪ್ರಮಾಣದ ನೀರು ರಸ್ತೆಗೆ ಹರಿದು ವ್ಯರ್ಥವಾಗುತ್ತಿತ್ತು. ಇದರಿಂದ ಸಾರ್ವಜನಿಕರು ಹಾಗೂ ದನ-ಕರುಗಳು ಮತ್ತು ಪಕ್ಷಿಗಳಿಗೆ ತೊಂದರೆಯಾಗುತ್ತಿದ್ದು, ತಕ್ಷಣ ದುರಸ್ತಿ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಮನವಿಗೆ ತಕ್ಷಣ ಸ್ಪಂದಿಸಿದ ಪುರಸಭೆ ಮುಖ್ಯಾಧಿಕಾರಿ ಶರವಣ ಅವರ ನಿರ್ದೇಶನದಂತೆ ನೂತನ ನೀರಿನ ತೊಟ್ಟಿ ನಿರ್ಮಿಸಿ, ಹಾಳಾಗಿದ್ದ ನಲ್ಲಿಗಳನ್ನು ದುರಸ್ತಿಗೊಳಿಸಲಾಗಿದೆ. ಇದರಿಂದ ಬರಗಾಲದ ಸಂದರ್ಭದಲ್ಲಿ ದನ-ಕರುಗಳು ಹಾಗೂ ಪಕ್ಷಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿದ್ದು, ನೀರಿನ ವ್ಯರ್ಥ ಹರಿವಿಗೂ ತಡೆ ಬಿದ್ದಿದೆ ಎಂದು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಜಿಲ್ಲಾ ಯುವ ಘಟಕದ ಅಧ್ಯಕ್ಷ ಹಾಗೂ ತಾಲೂಕು ಉಸ್ತುವಾರಿ ಬೇರಂಬಾಡಿ ರಂಗಪ್ಪನಾಯಕ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ತಾಲೂಕು ಅಧ್ಯಕ್ಷ ಸ್ವಾಮಿ ನಾಯಕ್, ಜಿಲ್ಲಾ ಗೌರವಾಧ್ಯಕ್ಷ ಶಿವಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಾಫರ್ ಹಾಗೂ ಜಿಲ್ಲಾ ಗೌರವಾಧ್ಯಕ್ಷ ರಹಮತುಲ್ಲಾಖಾನ್ ಉಪಸ್ಥಿತರಿದ್ದರು.

Continue Reading

Chamarajanagar

ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಚಾಲನೆ

Published

on

ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ವಾಸಿಸುವ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲು ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಹೇಳಿದರು.

ತಾಲೂಕಿನ ಯಡವನಹಳ್ಳಿ, ಕೋಟೆಕೆರೆ, ಕೆಲಸೂರು ಹಾಗೂ ಚಿಕ್ಕತುಪ್ಪೂರು ಗ್ರಾಮಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಯಡವನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಸಮುದಾಯದ ಬೀದಿಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, ಕೋಟೆಕೆರೆ ಗ್ರಾಮದ ಪರಿಶಿಷ್ಟ ಜಾತಿಯ ಸಮುದಾಯದ ಬೀದಿಯಲ್ಲಿ 30 ಲಕ್ಷ ರೂ. ವೆಚ್ಚದ ರಸ್ತೆ ಹಾಗೂ ಚರಂಡಿ ನಿರ್ಮಾಣ, ಕೆಲಸೂರು ಗ್ರಾಮದಲ್ಲಿ 30 ಲಕ್ಷ ರೂ. ಹಾಗೂ ಚಿಕ್ಕತುಪ್ಪೂರು ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಗ್ರಾಮಗಳ ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಜನರ ಜೀವನಮಟ್ಟವನ್ನು ಸುಧಾರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಗಣೇಶ್ ಪ್ರಸಾದ್ ಹೇಳಿದರು.

ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಚಾಮುಲ್ ನಿರ್ದೇಶಕ ಎಚ್.ಎಸ್. ನಂಜುಂಡಪ್ರಸಾದ್, ಚಿಕ್ಕತುಪ್ಪೂರು ಗ್ರಾಮದ ಗೌಡಿಕೆ ಕೆ.ಎಂ‌.ಮಹೇಶ್, ಗ್ರಾಪಂ ಮಾಜಿ ಅಧ್ಯಕ್ಷ ಶರಣು, ರಂಗಸ್ವಾಮಿ, ಮಹೇಶ, ರಾಮನಾಯಕ, ಗೋವಿಂದಚಾರಿ, ನಿಂಗರಾಜು, ದೊಡ್ಡೆನ್ನಮ್ಮ, ಪಿಣ್ಣಮ್ಮ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

Trending

error: Content is protected !!