Hassan
ಅವ್ವ ದತ್ತಿ ಪ್ರಶಸ್ತಿಗೆ ಲೇಖಕ ಸಾಹಿತಿ ಹಾಗೂ ಶಿಕ್ಷಕ ಪರಮೇಶ್ ಮಡಬಲು ಆಯ್ಕೆ
 
																								
												
												
											ಆಲೂರು:ಎಂ.ವಿ.ತ್ಯಾಗರಾಜ್ ಅಭಿನಂದನಾ ಸಮಿತಿ ಹಾಗೂ ಸುಮಂಗಲಿ ಸೇವಾಶ್ರಮ ಬೆಂಗಳೂರು ವತಿಯಿಂದ 2025 ನೇ ಸಾಲಿಗೆ ಕೊಡಮಾಡುವ “ಮಾಪಮ್ಮ ಎಸ್ ಹೊಸಮನಿ ಅವ್ವ ದತ್ತಿ ರಾಜ್ಯ ಪ್ರಶಸ್ತಿಗೆ” ಎಂ.ಜಿ.ಪರಮೇಶ್ ಮಡಬಲು ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ‘ಅವ್ವ’ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಪರಮೇಶ್ ಅವರು ಪ್ರಸ್ತುತ ಹೊಳೆನರಸೀಪುರ ತಾಲೂಕು ಶಾಲಾ ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು,ವಿಮರ್ಶಾ ಲೇಖನಗಳು ಹಾಗೂ ಕವನ ಕವಿತೆಗಳನ್ನು ಬರೆದಿದ್ದಾರೆ. ಇವರು ಈಗಾಗಲೇ ಹತ್ತು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ.ಈ ಮೇಲಿನ ಸಾಹಿತ್ಯಾತ್ಮಕ ಕಾರ್ಯ ವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಇದೇ ಮೇ 10 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕರ್ನಾಟಕ ವಚನ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎಂ.ವಿ.ತ್ಯಾಗರಾಜ್ ತಿಳಿಸಿದ್ದಾರೆ.
ವರದಿ ಸತೀಶ್ ಚಿಕ್ಕಕಣಗಾಲು
Hassan
ಸಕಲೇಶಪುರ: ಜೆಜೆಎಂ ಕಾಮಗಾರಿಗಳನ್ನು ಪರಿಶೀಲಿಸಿದ ಸಿಇಒ
 
														ಸಕಲೇಶಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು, ಸಕಲೇಶಪುರ ತಾಲೂಕು ಕುನಿಗನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗಾಳಿಗುಡ್ಡ, ಹೊಸಗದ್ದೆ, ಹೊಸಕೆರೆ, ಮಡ್ಡಿನಕೆರೆ, ಕುನಿಗನಹಳ್ಳಿ ಗ್ರಾಮಗಳು ಹಾಗೂ ಬಿರಡಹಳ್ಳಿ ಪಂಚಾಯಿತಿಯ ವ್ಯಾಪ್ತಿಯ ದೊಡ್ಡನಾಗರ ಗ್ರಾಮಗಳಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ವೇಳೆ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯ ಪಾಲಕ ಅಭಿಯಂತರರು, ಸಹಾಯಕ ನಿರ್ದೇಶಕರು(ಗ್ರಾ. ಉ),ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.
Hassan
ಚಿನ್ನ ಖರೀದಿಗೆ ಬಂದು ಮಗು ಹೊತ್ತೊಯ್ದ ಚಾಲಾಕಿ ಲೇಡಿ
 
														ಹಾಸನ: ನಗರದ ಗಾಂಧಿ ಬಜಾರ್ ನಲ್ಲಿ ಚಿನ್ನ ಖರೀದಿ ಮಾಡಲೆಂದು ಅಂಗಡಿಗೆ ಬಂದ ಚಾಲಾಕಿ ಲೇಡಿಯೊಬ್ಬಳು ಎರಡೂವರೆ ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡು ಹೋಗಿದ್ದಾಳೆ.
ಅಪರಿಚಿತ ಮಹಿಳೆ, ಕೆಂಪು ಚೂಡಿದಾರ್, ಹಳದಿ ವೇಲ್ ಧರಿಸಿದ್ದು, ಉಷಾ ಎಂಬುವವರ ಸುಪ್ರಿಯಾ ಎಂಬ ಹೆಣ್ಣು ಮಗಳನ್ನ ಯಾರಿಗೂ ತಿಳಿಯದಂತೆ ಕರೆದುಕೊಂಡು ಹೋಗಿದ್ದಾಳೆ.

ಈ ದೃಶ್ಯ ಗಾಂಧಿ ಬಜಾರ್ ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೆಂಗಸಿನ ಬಗ್ಗೆ ಹಾಗೂ ಮಗು ಬಗ್ಗೆ ಮಾಹಿತಿ ಸಿಕ್ಕಲ್ಲಿ ಹಾಸನ ನಗರ ಠಾಣೆ 08172-268333, 9480804745 ಅಥವಾ ತುರ್ತು ಸೇವೆ 112 ಗೆ ಕರೆ ಮಾಡಿ ತಿಳಿಸಲು ಕೋರಲಾಗಿದೆ.
Hassan
HIMS ಆವರಣದಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಗೆ ಶಾಸಕ ಸ್ವರೂಪ್ ಭೂಮಿ ಪೂಜೆ
 
														ಹಾಸನ: ನಗರದ ಹಾಸನ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕೇಂದ್ರ ಸರ್ಕಾರದ ಅನುದಾನದ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕ್ರಿಟಿಕಲ್ ಕೇರ್ ಸೆಂಟರ್ ಕಾಮಗಾರಿಗೆ ಶಾಸಕ ಸ್ವರೂಪ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು.
ಸುಮಾರು 13 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿಗೆ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಭೂಮಿ ಪೂಜೆ ನೆರವೇರಿಸಿ ಬಳಿಕ ಸುಮಾರು 6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳ ವಸತಿ ನಿಲಯದ ಹೆಚ್ಚುವರಿ ಕಟ್ಟಡಕ್ಕೂ ಅವರು ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳು ಹಾಗೂ ಶಾಸಕರ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಅದರಂತೆ ಇಂದು ಹಾಲುವಾಗಿಲು ಗ್ರಾಮದಲ್ಲಿ ಅಂಗನವಾಡಿ, ರಸ್ತೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಹಾಸನ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿಯೂ ಕ್ರಿಟಿಕಲ್ ಕೇರ್ ಸೆಂಟರ್ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ಸಾಕಷ್ಟು ಅನುದಾನ ಬಂದಿದ್ದು ಅದರ ಕಾಮಗಾರಿಯು ನಡೆಯುತ್ತಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ಒಳ್ಳೆಯ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
- 
																	   Hassan12 hours ago Hassan12 hours agoಹುಡಾ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮುಖಂಡರಿಂದ ಪ್ರತಿಭಟನೆ: ಪಕ್ಷಗೋಸ್ಕರ ಕೆಲಸ ಮಾಡಿದವರಿಗೆ ಸ್ಥಾನ ನೀಡುವಂತೆ ಕಯುಮ್ ಆಗ್ರಹ 
- 
																	   Hassan14 hours ago Hassan14 hours agoನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಸೈಯದ್ ತಾಜಿಂ ಬೃಹತ್ ಪ್ರತಿಭಟನೆ. 
- 
																	   Hassan10 hours ago Hassan10 hours agoಹಾಸನ: ದುರ್ನಾಥ ಬೀರುತ್ತಿರುವ ರಜತಾ ಕಾಂಪ್ಲೆಕ್ಸ್ ಹಿಂಭಾಗದ ರಸ್ತೆ 
- 
																	   Hassan15 hours ago Hassan15 hours agoಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ 
- 
																	   Hassan13 hours ago Hassan13 hours agoಹಾಲುವಾಗಿಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ 
- 
																	   Chikmagalur17 hours ago Chikmagalur17 hours agoರೈತನ ಮೇಲೆ ಕಾಡಾನೆ ದಾಳಿ, ಬದುಕುಳಿದ ರೈತ ಫಿಲಿಪ್ 
- 
																	   Kodagu10 hours ago Kodagu10 hours agoಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ 
- 
																	   Manglore11 hours ago Manglore11 hours agoಧರ್ಮಸ್ಥಳ ಪ್ರಕರಣ- ಕಾಡಿನಲ್ಲಿ ಶೋಧನೆ ನಡೆಸಿ ತೆರಳಿದ ಎಸ್ಐಟಿ ತಂಡ 

 
											 
											 
											 
											 
											