Hassan
ಅವ್ವ ದತ್ತಿ ಪ್ರಶಸ್ತಿಗೆ ಲೇಖಕ ಸಾಹಿತಿ ಹಾಗೂ ಶಿಕ್ಷಕ ಪರಮೇಶ್ ಮಡಬಲು ಆಯ್ಕೆ
ಆಲೂರು:ಎಂ.ವಿ.ತ್ಯಾಗರಾಜ್ ಅಭಿನಂದನಾ ಸಮಿತಿ ಹಾಗೂ ಸುಮಂಗಲಿ ಸೇವಾಶ್ರಮ ಬೆಂಗಳೂರು ವತಿಯಿಂದ 2025 ನೇ ಸಾಲಿಗೆ ಕೊಡಮಾಡುವ “ಮಾಪಮ್ಮ ಎಸ್ ಹೊಸಮನಿ ಅವ್ವ ದತ್ತಿ ರಾಜ್ಯ ಪ್ರಶಸ್ತಿಗೆ” ಎಂ.ಜಿ.ಪರಮೇಶ್ ಮಡಬಲು ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ‘ಅವ್ವ’ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಪರಮೇಶ್ ಅವರು ಪ್ರಸ್ತುತ ಹೊಳೆನರಸೀಪುರ ತಾಲೂಕು ಶಾಲಾ ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು,ವಿಮರ್ಶಾ ಲೇಖನಗಳು ಹಾಗೂ ಕವನ ಕವಿತೆಗಳನ್ನು ಬರೆದಿದ್ದಾರೆ. ಇವರು ಈಗಾಗಲೇ ಹತ್ತು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ.ಈ ಮೇಲಿನ ಸಾಹಿತ್ಯಾತ್ಮಕ ಕಾರ್ಯ ವನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಇದೇ ಮೇ 10 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕರ್ನಾಟಕ ವಚನ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಎಂ.ವಿ.ತ್ಯಾಗರಾಜ್ ತಿಳಿಸಿದ್ದಾರೆ.
ವರದಿ ಸತೀಶ್ ಚಿಕ್ಕಕಣಗಾಲು
Hassan
ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ: ಈಶ್ವರ್ ಖಂಡ್ರೆ
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿರುವ ಚರ್ಚೆ ನಾಯಕತ್ವ ಬದಲಾವಣೆಗಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹ ಅಷ್ಟೆ. ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಅನಗತ್ಯ ಮತ್ತು ಅಪ್ರಸ್ತುತ ಎಂದು ತಳ್ಳಿ ಹಾಕಿದರು.

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಪಕ್ಷದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಅದನ್ನೇ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸುವ ಅಗತ್ಯವಿಲ ಎಂದು ಹೇಳಿದರು.
ಸಿಎಂ ಹಾಗೂ ಡಿಸಿಎಂ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿದ್ದರಲ್ಲಿ ವಿಶೇಷವೇನೂ ಇಲ್ಲ. ನಾವು ಎಲ್ಲರೂ ಒಂದೇ ಕುಟುಂಬ ದವರಂತೆ ಇದ್ದೇವೆ. ಸ್ನೇಹಿತರಾಗಿ ಟೀ ಕುಡಿಯುತ್ತೇವೆ, ಊಟಕ್ಕೆ ಹೋಗುತ್ತೇವೆ, ಪ್ರತ್ಯೇಕವಾಗಿ ಮಾತುಕತೆ ನಡೆಸುತ್ತೇವೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತು ಕೆಲ ಕಾಂಗ್ರೆಸ್ ಶಾಸಕರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಆ ಹೇಳಿಕೆ ನೀಡಿದವರನ್ನೇ ಕೇಳಬೇಕು. ನಾನು ಸರ್ಕಾರದ ಭಾಗವಾಗಿ ಹೇಳುವುದೇನೆಂದರೆ, ಸರ್ಕಾರ ಅತ್ಯಂತ ಗಟ್ಟಿಯಾಗಿದ್ದು, ಜನಪರ ಆಡಳಿತ ನೀಡುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಕಾರ್ಯವೈಖರಿ ಸಮರ್ಥಿಸಿಕೊಂಡ ಖಂಡ್ರೆ, ಅಭಿವೃದ್ಧಿ, ಪ್ರಗತಿ ಮತ್ತು ಸರ್ಕಾರದ ಸಾಧನೆಗಳ ಬಗ್ಗೆ ಚರ್ಚೆ ಆಗಬೇಕು. ಅನಗತ್ಯ ರಾಜಕೀಯ ಊಹಾಪೋಹಗಳಿಗೆ ಹೆಚ್ಚು ಮಹತ್ವ ನೀಡುವುದು ಸೂಕ್ತವಲ್ಲ ಎಂದರು.
ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆ ಕುರಿತು ಪ್ರಶ್ನಿಸಿದಾಗ, ಅದರ ಬಗ್ಗೆ ಅವರನ್ನೇ ಕೇಳಿ. ನಾನು ಈಗಾಗಲೇ ಹೇಳಿರುವಂತೆ ಈ ಚರ್ಚೆ ಅಪ್ರಸ್ತುತ ಎಂದು ಉತ್ತರಿಸಿದರು.

ತಮ್ಮ ದೆಹಲಿ ಭೇಟಿ ಕುರಿತು ಕೇಳಿದ ಪ್ರಶ್ನೆಗೆ ಖಂಡ್ರೆ ನಗೆ ಚಟಾಕಿ ಹಾರಿಸಿ, ನಾನೇಕೆ ದೆಹಲಿಗೆ ಹೋಗಬೇಕು ಎಂದು ಮರು ಪ್ರಶ್ನೆ ಹಾಕಿದರು.
Hassan
ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ ವಾಪಸ್ ಪಡೆಯಲು ಒತ್ತಾಯ
ಹಾಸನ, ಮೇ 26: ರೈತ ವಿರೋಧಿ ಎಂದು ಆರೋಪಿಸಲ್ಪಡುವ ‘ಜಾನುವಾರು ವಧೆ ಹಾಗೂ ಮಾರಾಟ ನಿಷೇಧ ಕಾಯ್ದೆ 2020’ ಅನ್ನು ವಾಪಸ್ ಪಡೆಯಬೇಕು ಹಾಗೂ ರೈತರು ತಮ್ಮ ಜಾನುವಾರುಗಳನ್ನು ಮುಕ್ತವಾಗಿ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ವಿವಿಧ ರೈತ, ದಲಿತ ಮತ್ತು ಜನಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿವೆ.
Hassan
“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಹಾಸನ: ರಾಜ್ಯ ಸರ್ಕಾರದ ಸಾಲದ ಪ್ರಮಾಣ 7 ಲಕ್ಷ ಕೋಟಿ ರೂ. ದಾಟುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ತ್ಯಜಿಸುವ ವೇಳೆಗೆ ಅದು 10 ಲಕ್ಷ ಕೋಟಿ ರೂ. ತಲುಪಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೆ.ಸಿ. ರೆಡ್ಡಿ ಕಾಲದಿಂದ ಬಸವರಾಜ ಬೊಮ್ಮಾಯಿ ಸರ್ಕಾರದವರೆಗೆ ಒಟ್ಟು ಶೇ.47ರಷ್ಟು ಸಾಲ ಮಾಡಲಾಗಿತ್ತು. ಆದರೆ ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಶೇ.53ರಷ್ಟು ಸಾಲ ಮಾಡಿದೆ” ಎಂದು ಟೀಕಿಸಿದರು.

ಬಿಜೆಪಿ ಸರ್ಕಾರ ಆದಾಯದ ಆಧಾರದ ಮೇಲೆ ಬಡವರಿಗೆ ಯೋಜನೆಗಳನ್ನು ಜಾರಿಗೆ ತಂದಿತ್ತು. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಈಗ ಅವುಗಳನ್ನು ಸಮರ್ಪಕವಾಗಿ ನೀಡಲು ವಿಫಲವಾಗಿದೆ ಎಂದು ದೂರಿದರು. ಸರ್ಕಾರದ ಖಜಾನೆ ಖಾಲಿಯಾಗಿರುವ ಕಾರಣ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಮುಂದಾಗಿದೆ. ಬಡವರ ಅನ್ನಕ್ಕೂ ಕತ್ತರಿ ಹಾಕಲು ಹೊರಟಿದೆ ಎಂದು ಆರೋಪಿಸಿದರು.
ಅನ್ನಭಾಗ್ಯ ಯೋಜನೆ ಸಿದ್ದರಾಮಯ್ಯ ಅವರದ್ದಲ್ಲ. ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ
ನೀಡುತ್ತಿರುವ ಅಕ್ಕಿಯೇ ಜನರಿಗೆ ತಲುಪುತ್ತಿದೆ. ಕಾಂಗ್ರೆಸ್ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಅದನ್ನು ಈಡೇರಿಸಿಲ್ಲ” ಎಂದು ಹೇಳಿದರು.

ರಾಜ್ಯ ಸರ್ಕಾರ ಕೇಂದ್ರಕ್ಕೆ ಹಣ ಪಾವತಿಸದ ಹಿನ್ನೆಲೆ ಅಕ್ಕಿ ಪೂರೈಕೆ ಸಮಸ್ಯೆ ಉಂಟಾಗಿದೆ. ಕಳೆದ ಮೂರು ತಿಂಗಳಿಂದ ಮಶಾಸನ ನೀಡುತ್ತಿಲ್ಲ. ಅನರ್ಹರನ್ನು ಹೊರಗಿಡುವ ನೆಪ ಹೇಳಲಾಗುತ್ತಿದೆ ಎಂದು ಟೀಕಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲೆಗಳಿಗೆ ಭೇಟಿ ನೀಡಬೇಕು ಎಂದು ಮುಖ್ಯಮಂತ್ರಿ ಹೇಳಿದ್ದರೂ, ಸಚಿವರು ಜನರ ಸಮಸ್ಯೆ ಆಲಿಸುವ ಬದಲು ದೆಹಲಿಗೆ ತೆರಳುತ್ತಿದ್ದಾರೆ ಎಂದು ಆರೋಪಿಸಿದರು. “ಕಾಂಗ್ರೆಸ್ ಹೈಕಮಾಂಡ್ ‘ವೀಕ್ ಹೈಕಮಾಂಡ್’ ಆಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದಲ್ಲಿ ಹಣವಿಲ್ಲ. ಅಬಕಾರಿ ಆದಾಯದಿಂದಲೇ ಸರ್ಕಾರ ನಡೆಯುತ್ತಿದೆ” ಎಂದು ವ್ಯಂಗ್ಯವಾಡಿದರು.

ಆಳಂದ ಘಟನೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದ್ದು, ಅದರ ಪರಿಣಾಮವಾಗಿ ಭಟ್ಕಳದಲ್ಲಿ ದೇವಾಲಯ ಧ್ವಂಸ ಘಟನೆ ನಡೆದಿದೆ ಎಂದು ಆರೋಪಿಸಿದ ಅವರು, ಈ ಕುರಿತು ಮೇ 29ರಂದು “ಭಟ್ಕಳ ಚಲೋ” ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
“ರಾಜ್ಯ ಸರ್ಕಾರ ಹಿಂದೂಗಳ ರಕ್ಷಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಮುಸ್ಲಿಂರ ಓಲೈಕೆಯಲ್ಲಿ ತೊಡಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂಧನ ದರ ಏರಿಕೆಯಿಂದ ಕೇಂದ್ರ ಸರ್ಕಾರಕ್ಕೆ ಒಂದು ನಯಾಪೈಸೆಯೂ ಆದಾಯ ಬರುವುದಿಲ್ಲ. ಆದರೆ ರಾಜ್ಯ ಸರ್ಕಾರಕ್ಕೆ ಸುಮಾರು 6 ಸಾವಿರ ಕೋಟಿ ರೂ. ಆದಾಯ ಬರುತ್ತಿದೆ ಎಂದು ಆರೋಪಿಸಿದ ಅವರು, “ಮೇ 30ರಂದು ಕಾಂಗ್ರೆಸ್ ಯಾವ ಮುಖ ಇಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನಬಿನ್ ಅವರ ರಾಜ್ಯ ಭೇಟಿ, ರಾಜ್ಯಸಭೆ ಚುನಾವಣೆ ಹಾಗೂ ಎಚ್.ಡಿ.ದೇವೇಗೌಡ ಅವರ ಮರು ಆಯ್ಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನಮ್ಮ ಅಭಿಪ್ರಾಯವನ್ನು ಪಕ್ಷದ ರಾಷ್ಟ್ರೀಯ ನಾಯಕರಿಗೆ ತಿಳಿಸಿದ್ದೇವೆ. ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ” ಎಂದರು.
“2028ರ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಲಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯನ್ನು ಹೈಕಮಾಂಡ್ ಒಬ್ಬರನ್ನೇ ದೆಹಲಿಗೆ ಕರೆದಿದ್ದರೂ, ಅವರು ಮಂತ್ರಿಗಳನ್ನು ಒಟ್ಟಿಗೆ ಕರೆದುಕೊಂಡು ಹೋಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಬಹುದು. ಆದರೆ ಡಿ.ಕೆ. ಶಿವಕುಮಾರ್ ಅವರಿಗೆ ‘ಖಾಲಿ ತಟ್ಟೆ’ ಸಿಗಲಿದೆ ಎಂದು ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಶಾಸಕ ಸಿಮೆಂಟ್ ಮಂಜು, ಜಿಲ್ಲಾಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
State21 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
State2 hours agoರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ನಾಯಕತ್ವ ಬದಲಾವಣೆ: ಹೈಕಮಾಂಡ್ ಸಭೆ ಕುತೂಹಲ
-
Hassan23 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Hassan4 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Sports2 hours agoಧರ್ಮಶಾಲಾದಲ್ಲಿ ಆರ್ಸಿಬಿಗೆ ಗುಡ್ ನ್ಯೂಸ್: ಫಿಲ್ ಸಾಲ್ಟ್ ಕಮ್ಬ್ಯಾಕ್ ಸಾಧ್ಯತೆ
-
Chamarajanagar22 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Mysore10 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Kodagu24 hours agoಬೇಡು ಹಬ್ಬ : ಮದ್ಯ ಮಾರಾಟ ನಿಷೇಧ
