Connect with us

Chamarajanagar

ಯಳಂದೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸರಹದ್ದು ಗ್ರಾಮಗಳ ಎಸ್ ಸಿ ಎಸ್ ಟಿ ಸಭೆ

Published

on

ಯಳಂದೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸರಹದ್ದು ಗ್ರಾಮಗಳ ಎಸ್ ಸಿ ಎಸ್ ಟಿ ಸಭೆ

ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಸರಹದ್ದು ಗ್ರಾಮಗಳ ಎಸ್ ಸಿ ಎಸ್ ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದ ವೃತ್ತ ನಿರೀಕ್ಷಕರಾದ ಶ್ರೀ ಕಾಂತ್

ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ನಂದೀಶ್ ಕುಮಾರ್, ಮಾಹದೇವ, ಪಟ್ಟಣದ ಹಾಗೂ ಗ್ರಾಮಗಳ ಮುಖಂಡರು ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಚಂಡು ಹೂ ಕಾರ್ಖಾನೆ ಮುಚ್ಚಿಸುವಂತೆ ಒತ್ತಾಯ:ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ

Published

on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕಗ್ಗಳದಗುಂಡಿ ಗ್ರಾಮದ ಸಮೀಪವಿರುವ ಚಂಡು ಹೂ ಕಾರ್ಖಾನೆಯನ್ನು ಮುಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗುಂಡ್ಲುಪೇಟೆಯಿಂದ ಬೈಕ್ ರ್ಯಾಲಿ ಮೂಲಕ ನಗರದ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ರೈತ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿದರು.

ಪ್ರತಿಭಟನೆಯಲ್ಲಿ ವಿವಿಧ ತಾಲ್ಲೂಕಿನ ರೈತ ಮುಖಂಡರು ಭಾಗವಹಿಸಿದ್ದರು.

Continue Reading

Chamarajanagar

ಬೈಕ್ ಡಿಕ್ಕಿ : ಸ್ಕೂಟರ್ ಸವಾರ ಸಾ*ವು

Published

on

ಚಾಮರಾಜನಗರ: ತಾಲ್ಲೂಕಿನ ಸಂತೇಮರಹಳ್ಳಿ ಪೆಟ್ರೋಲ್ ಬಂಕ್ ಸಮೀಪದಲ್ಲಿ ಬೈಕ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಂಭವಿಸಿದೆ.

ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ(50) ಮೃತ ವ್ಯಕ್ತಿ.

ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹದೇವಸ್ವಾಮಿ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸ್ಥಳದಲ್ಲೇ ಮೃತ.

ವಿಷಯ ತಿಳಿದು ಸ್ಥಳಕ್ಕೆ ಸಂತೇಮರಹಳ್ಳಿ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chamarajanagar

ಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ

Published

on

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.53 ಕೋಟಿ  ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ರವರ ಸಮ್ಮುಖದಲ್ಲಿ ಇಂದು ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 6 ಗಂಟೆಗೆ ಮುಕ್ತಾಯವಾಯಿತು.

ಸರ್ಕಾರಿ ರಜಾ ದಿನ, ಅಮಾವಾಸ್ಯೆ , ಕಾರ್ತಿಕ ಮಾಸ, ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದu ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 28 ದಿನಗಳ ಅವಧಿಯಲ್ಲಿ 2,53,98,859 ನಗದು ಹಣ, 25 ಗ್ರಾಂ ಚಿನ್ನ ಹಾಗೂ 1 ಕೆಜಿ 253 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ. ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3 ನೋಟುಗಳು 16 ವಿದೇಶಿ ನೋಟುಗಳು ಕಂಡುಬಂದಿವೆ.

 

ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ , ಭಾರತಿ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.

Continue Reading

Trending

error: Content is protected !!