Chamarajanagar
ಪಟ್ಟಣದ 7ನೇ ವಾರ್ಡ್ ವ್ಯಾಪ್ತಿಯ ಹಳೆ ಅಂಚೆ ಕಚೇರಿ ರಸ್ತೆ ಅಂಗಡಿ ಬೀದಿ ರಸ್ತೆಗಳಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು
ಯಳಂದೂರು
ಪಟ್ಟಣದ 7ನೇ ವಾರ್ಡ್ ವ್ಯಾಪ್ತಿಯ ಹಳೆ ಅಂಚೆ ಕಚೇರಿ ರಸ್ತೆ ಅಂಗಡಿ ಬೀದಿ ರಸ್ತೆಗಳಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು
ಪರ ಏಳನೇ ವಾರ್ಡಿನ ಮುಖಂಡರು ಮತಯಾಚನೆ ಮಾಡಿದರು.
ಭವ್ಯ ಭಾರತದ ಸುಭದ್ರತೆಗಾಗಿ ಹಾಗೂ ಪ್ರಸಿದ್ಧ ಭಾರತಕ್ಕಾಗಿ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಂತ್ರಿಯಾಗಿ ಮುಂದುವರಿಸಲು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸರ್ವತ ಮುಖ ಅಭಿವೃದ್ಧಿಗೆ ಹಾಗೂ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ಪಾಲ್ರಾಜು ಅವರನ್ನು ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯಳಂದೂರು ಮಂಡಲ ಅಧ್ಯಕ್ಷರಾದ ಅನಿಲ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಕಿಟ್ಟಿ ,ಸೂರ್ಯನಾರಾಯಣ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಂಗಾರು, ಮುಖಂಡರಾದ ನಟರಾಜು ಶ್ರೀನಿವಾಸ ಸರ್ ವೀರೇಶ್ ಮಹೇಶ್ ಶಾಂತರಾಜು ರವಿ ಸೇರಿದಂತೆ ಇತರರು ಹಾಜರಿದ್ದರು
Chamarajanagar
ಮುತ್ತಿಗೆ ಗ್ರಾಮದಲ್ಲಿ ಹಾವು ಪತ್ತೆ: ಸ್ನೇಕ್ ಚಾಂಪು ತಂಡದಿಂದ ಸುರಕ್ಷಿತವಾಗಿ ಹಿಡಿತ
ಚಾಮರಾಜನಗರ: ತಾಲೂಕಿನ ಮುತ್ತಿಗೆ ಗ್ರಾಮದ ಕೆಂಪೇಗೌಡ ಅವರ ಮನೆಯಲ್ಲಿ ಹಾವು ಕಾಣಿಸಿಕೊಂಡ ಘಟನೆ ಇಂದು ಸಂಭವಿಸಿದೆ.
ಮನೆಯೊಳಗೆ ಹಾವು ಇರುವುದನ್ನು ಗಮನಿಸಿದ ಕುಟುಂಬದವರು ಆತಂಕಗೊಂಡು ತಕ್ಷಣ ಚಾಮರಾಜನಗರದ ಸ್ನೇಕ್ ಚಾಂಪು ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಸ್ನೇಕ್ ಚಾಂಪು ತಂಡದವರು ಸ್ಥಳಕ್ಕೆ ಧಾವಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಈ ಕಾರ್ಯಾಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಗೋ ಮಹದೇವಸ್ವಾಮಿ ಮಾತನಾಡಿ, ನಮ್ಮ ಗ್ರಾಮದೊಳಗೆ ಅಥವಾ ಸುತ್ತಮುತ್ತ ಎಲ್ಲಿಯಾದರೂ ಹಾವು ಕಂಡುಬಂದರೆ ಭಯಪಡದೇ ತಕ್ಷಣ ತಿಳಿಸಿ. ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಜನರ ಪ್ರಾಣ ರಕ್ಷಿಸುವುದು ನಮ್ಮ ಸಮಾಜ ಸೇವೆಯ ಭಾಗ ಎಂದು ತಿಳಿಸಿದರು.
Chamarajanagar
ಕೌಶಲ್ಯಾಧಾರಿತ ತರಬೇತಿಗೆ ಹೆಚ್ಚು ಆದ್ಯತೆ ನೀಡಿ: ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ
ಸಿಇಟಿ ಆನ್‌ಲೈನ್ ಉಚಿತ ತರಬೇತಿ, ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ
ಚಾಮರಾಜನಗರ: ಪ್ರಸ್ತುತ ದಿನಮಾನಗಳಲ್ಲಿ ಸಮಾಜದಲ್ಲಿ ಏನಾದರೂ, ಬದಲಾವಣೆ ಕಾಣುವಂತಾಗಿದ್ದರೆ ಅದು ಶಿಕ್ಷಣದಿಂದ ಮಾತ್ರ ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಸಿಇಟಿ ಉಚಿತ ಆನ್‌ಲೈನ್ ತರಬೇತಿ ಹಾಗೂ ಎಂಎಸ್‌ಐಎಲ್ ವತಿಯಿಂದ ಸಿಇಟಿ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಮ್ಮ ಕುಟುಂಬದಲ್ಲಿ ಸಹೋದರರು ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ, ನಾನು ಮಾತ್ರ ಓದಲೇಬೇಕು ಎಂಬ ಹಠತೊಟ್ಟು, ಉನ್ನತ ಶಿಕ್ಷಣ ಪಡೆಯುವ ಮೂಲಕ ಇಂದು ಉನ್ನತಮಟ್ಟದಲ್ಲಿ ನಿಂತಿದ್ದೇನೆ. ಇದಕ್ಕೆಲ್ಲ ಶಿಕ್ಷಣ ಕಾರಣ ಎಂದರು. ಇಂದು ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್ ಪ್ರವೇಶ ಪಡೆಯಬೇಕಾದರೆ ಸಿಇಟಿ. ನೀಟ್, ಜೆಇಇ ತರಬೇತಿ ಪಡೆಯಲೇಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕೇವಲ ಶಿಕ್ಷಣ ಪಡೆದರೆ ಸಾಲದು, ವಿವಿಧ ಕೌಶಲ್ಯಾಧಾರಿತ ತರಬೇತಿ ಪಡೆಯಬೇಕು, ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾವಸಾಹತು ಪ್ರದೇ಼ಶ಼ದಲ್ಲಿ ವಿವಿಧ ಪ್ರತಿಷ್ಠಿತ ಕೈಗಾರಿಕೆಗಳು ಸ್ಥಾಪನೆಯಾಗಿದ್ದು, ತರಬೇತಿಗೆ ತಕ್ಕ ಉದ್ಯೋಗಪಡೆಯಬಹುದಾಗಿದೆ ಎಂದರು.

ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಹುತೇಕ ವ್ಯಾಸಂಗ ಮಾಡುವವರು ಬಡವರ್ಗದ ವಿದ್ಯಾರ್ಥಿಗಳೇ ಆಗಿದ್ದಾರೆ, ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು, ತಾವು ಅಂದುಕೊಂಡ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜಯಕುಮಾರ್, ನಾರಾಯಣ, ಕೇಶವನ್, ನಿವೃತ್ತ ಪ್ರಾಂಶುಪಾಲ ಸೋಮಣ್ಣ, ಸಂಪನ್ಮೂಲವ್ಯಕ್ತಿಗಳಾದ ಮಾದೇಶ್, ದೀಪಕ್, ಮಲ್ಲಿಕಾರ್ಜುನ್, ಚೂಡಾ ಸದಸ್ಯ ರಾಜೇಂದ್ರ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
Chamarajanagar
ಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
ಚಾಮರಾಜನಗರ: ತಾಲೂಕಿನ ಇರಸವಾಡಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿರುವ ಘಟನೆ ಸಂಭವಿಸಿದೆ.
ಭಾನುವಾರ ತಡ ರಾತ್ರಿಯಲ್ಲಿ ಗ್ರಾಮದ ರಂಗಸ್ವಾಮಿ ಶೆಟ್ಟಿ ಅವರ ಕೊಟ್ಟಿಗೆಗೆ ನುಗ್ಗಿದ ಚಿರತೆ, ಹಸುವಿನ ಹಿಂದಿನ ಭಾಗವನ್ನು ಸಂಪೂರ್ಣವಾಗಿ ತಿಂದು ಬಲಿ ಪಡೆದಿದೆ.

ಬೆಳಗಿನ ಜಾವ ವಿಷಯ ತಿಳಿದು ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ಉಂಟಾಗಿದೆ. ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.
ಚಿರತೆ ಮರುದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಗಸ್ತು ಹೆಚ್ಚಿಸಬೇಕು ಹಾಗೂ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
-
Mandya13 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya14 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan15 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Mandya11 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
-
Chamarajanagar22 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore20 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya13 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special9 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
