Connect with us

Chamarajanagar

ಯಳಂದೂರು: ಹೊನ್ನೂರು ಗ್ರಾಮದಲ್ಲಿ ಮಳೆಗಾಗಿ ಗ್ರಾಮದ ಹೊರಭಾಗದ ಮಳೆರಾಯಸ್ವಾಮಿಗೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು.

Published

on

ಗ್ರಾಮದ ಹೊರ ವರವಲಯದಲ್ಲಿರುವ ಯಳಂದೂರು ಕೆರೆ ಅರಳಿ ಮರದ ಬಳಿ ಮಳೆ ರಾಯ ಸ್ವಾಮಿಗೆ ಪೂಜೆ ಸಲ್ಲಿಸಿ ಮಳೆ ಸುರಿಸಿ ಭೂಮಿ ತಂಪುಗೊಳಿಸೆಂದು ಮಳೆರಾಯನನ್ನು ಪ್ರಾರ್ಥಿಸಿದರು.ಈ ಬಾರಿ ‘ಹಿಂದೆಂದೂ ಕಂಡರಿಯದ ಬರ ನಾಡನ್ನು ಆವರಿಸಿದೆ.‌ ಎಲ್ಲೆಡೆ ಕೊಳವೆ ಬಾವಿಗಳು ಬತ್ತಿವೆ. ಹಾಗಾಗಿ ಮಳೆ ಸುರಿಸಿ ನಾಡಿನ ಜನರನ್ನು ಉದ್ಧರಿಸು ಎಂದು ಗ್ರಾಮದ ರೈತರು ಹಾಗೂ ಗ್ರಾಮಸ್ಥರೊಂದಿಗೆ ಮಳೆ ದೇವರನ್ನು ಪ್ರಾರ್ಥಿಸಿದರು.
ಪೂಜೆ ಹಾಗೂ ಪ್ರಾರ್ಥನೆ ಬಳಿಕ ನೆರೆದ ಗ್ರಾಮಸ್ಥರಿಗೆಲ್ಲಾ ಗ್ರಾಮಸ್ಥರು ಯುವಕರು ತಯಾರಿಸಿದ ಹುರುಳಿ ಕಾಳು ಸೊಪ್ಪು, ರಾಗಿ ಅಂಬಲಿ ಸಾರ್ವಜನಿಕರಿಗೆ ವಿತರಿಸಲಾಯಿತು .
ಈ ಸಂದರ್ಭ ಗ್ರಾಮದ ಯುವಕರು ಮುಖಂಡರು ಸಾರ್ವಜನಿಕರು ಭಾಗವಹಿಸಿದ್ದರು

Continue Reading
Click to comment

Leave a Reply

Your email address will not be published. Required fields are marked *

Chamarajanagar

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ| ಅಗತ್ಯ ಸಿದ್ದತೆ ಕೈಗೊಳ್ಳಲಾಗಿದೆ: ಶ್ರೀರೂಪ

Published

on

ಚಾಮರಾಜನಗರ: ನಾಳೆಯಿಂದ ಮಾ.17 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯಿಂದ ಒಟ್ಟು 6285 ಹೊಸ ವಿದ್ಯಾರ್ಥಿಗಳು, 180 ಖಾಸಗಿ ವಿದ್ಯಾರ್ಥಿಗಳು ಹಾಗೂ 474 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6909 ಪರೀಕ್ಷಾರ್ಥಿಗಳು ಹಾಜರಾಗಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳು ಇರಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.

ಪರೀಕ್ಷಾ ದಿನಗಳಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ (ಹಾಲ್ ಟಿಕೇಟ್) ತೋರಿಸಿ ತಮ್ಮ ಗ್ರಾಮಗಳಿಂದ ಪರೀಕ್ಷಾ ಕೇಂದ್ರಗಳಿಗೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಸಂಚರಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರವಿದ್ದರೆ ಕೋರಿಕೆಯ ಮೇರೆಗೆ ಬಸ್ ನಿಲುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.


ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಹಾಗೂ ಗೌಪ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಇಬ್ಬರು ಶುಶ್ರೂಷಕರನ್ನು ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ನೇಮಿಸಲಾಗಿದೆ.

ಪರೀಕ್ಷಾ ನಡೆಯುವ ಸಮಯದಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಓದುವ ಸಮಯದಲ್ಲಿ ತೊಂದರೆಯಾಗದಂತೆ ನಿರಂತರ ವಿದ್ಯುತ್ ಪೂರೈಸಲು ಸೆಸ್ಕ್ ಅಧಿಕಾರಿಗಳಿಗೆ ನಿದೇಶನ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಪಾವಿತ್ರತೆಯನ್ನು ಕಾಪಾಡುವ ದೃಷ್ಠಿಯಿಂದ ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ಸಿ.ಸಿ. ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯು ಸಿ.ಸಿ. ಟಿವಿ. ಕಣ್ಗಾವಲಿನಲ್ಲಿ ನಡೆಯಲಿದೆ. ಜಿಲ್ಲಾ ಹಂತದಲ್ಲಿ ಇದನ್ನು ವೀಕ್ಷಿಸಲು ಪ್ರತ್ಯೇಕ ತಂಡವನ್ನು ರಚಿಸಲಾಗಿದೆ.

ಪರೀಕ್ಷಾ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಬಹುದಾದ ಸುಳ್ಳುಸುದ್ದಿ, ವದಂತಿಗಳಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಿವಿಗೊಡಬಾರದು. ಪರೀಕ್ಷಾ ಪಾವಿತ್ರತೆ ಕಾಪಾಡಲು ಎಲ್ಲಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.

Continue Reading

Chamarajanagar

ಉದ್ಯೋಗ ಮೇಳದಲ್ಲಿ 1290 ಮಂದಿ ಭಾಗಿ: 193 ಮಂದಿಗೆ ನೇಮಕಾತಿ ಪತ್ರ ವಿತರಣೆ

Published

on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಜೀವಿನಿ-ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಇನ್ನಿತರ ಇಲಾಖೆ, ನಿಗಮ ಆಶ್ರಯದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಜಿಲ್ಲಾ ಕೇಂದ್ರದಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 1290 ಮಂದಿ ಭಾಗಿಯಾಗಿದ್ದರು. ಈ ಪೈಕಿ 193 ಮಂದಿ ವಿವಿಧ ಕಂಪನಿಗಳಲ್ಲಿ ಉದ್ಯೋಗಕ್ಕೆ ನೇಮಕವಾಗಿದ್ದು, 480 ಅಭ್ಯರ್ಥಿಗಳು ಉದ್ಯೋಗಕ್ಕಾಗಿ 2ನೇ ಹಂತದ (ಶಾರ್ಟ್ ಲಿಸ್ಟ್) ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.


ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸದ ಸುನೀಲ್ ಬೋಸ್ ಉದ್ಯೋಗ ನೇಮಕಾತಿ ಪತ್ರ ವಿತರಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಹೆಚ್.ವಿ. ಚಂದ್ರು ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ. ಡಿ.ಸಿ, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷರಾದ ಸೋಮೇಶ್ವರ, ಇತರರು ಇದ್ದರು.

Continue Reading

Chamarajanagar

ಕಾರ್ಮಿಕ ಇಲಾಖೆ ವತಿಯಿಂದ ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆ

Published

on

ಚಾಮರಾಜನಗರ: ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ವಿಶೇಷ ಚೇತನರಿಗೆ ತ್ರಿಚಕ್ರ ವಾಹನವನ್ನು ವಿತರಣೆ ಮಾಡಲಾಯಿತು.

ಸಿಎಸ್‍ಆರ್ ನೆರವಿನಡಿ ವಿಶೇಷಚೇತನರಿಗೆ ತ್ರಿಚಕ್ರ ವಾಹನ ನೀಡುವಂತೆ ಕಾರ್ಮಿಕ ಇಲಾಖೆ ವತಿಯಿಂದ ಉದ್ಯಮಗಳಿಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಎಲೆಕ್ಟ್ರಾನಿಕ್ ಮಾನ್ಯುಫ್ಯಾಕ್ಚರಿಂಗ್ ಹಾಗೂ ಕಲರ್ ಟೋನ್ ಟೆಕ್ಸ್‌ಟೈಲ್ಸ್‌ ಪ್ರೈಲಿಮಿಟೆಡ್ ವಿಶೇಷಚೇತನರಿಗೆ ಎರಡು ತ್ರಿಚಕ್ರ ವಾಹನಗಳನ್ನು ನೀಡಿವೆ.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚುಡಾ ಮಹಮ್ಮದ್ ಅಸ್ಗರ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರಯ್ಯ, ಕಾರ್ಖಾನೆಯ ಹೆಚ್.ಆರ್ ಮತ್ತು ಜನರಲ್ ಮ್ಯಾನೇಜರ್ ಹಾಗೂ ಜಯೇಂದ್ರ, ರಂಗನಾಥ್ ಹೇಮಂತ್ ಇದ್ದರು.

Continue Reading

Trending

error: Content is protected !!