Connect with us

Mysore

ರಾಜ್ಯದಲ್ಲಿ ಯತೀಂದ್ರ ಸೇಲ್ಸ್ ಟ್ಯಾಕ್ಸ್ ಕಡ್ಡಾಯ: ಪ್ರತಾಪ್ ಸಿಂಹ ಆರೋಪ

Published

on

ಮೈಸೂರು: ರಾಜ್ಯ ಸರ್ಕಾರದ ಆಡಳಿತದಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ ವಿಚಾರದಲ್ಲಿ, ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಯತೀಂದ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ.ಅನಧಿಕೃತವಾಗಿ ವರ್ಗಾವಣೆ ಸಚಿವರಾಗಿದ್ದಾರೆ. ಸಿದ್ದರಾಮಯ್ಯಗೆ ಯತೀಂದ್ರ ಕೆಟ್ಟ ಹೆಸರು ತರುತ್ತಿದ್ದಾರೆ. ಸಿದ್ದರಾಮಯ್ಯ ತಲೆ ತಗ್ಗಿಸುವ ಕೆಲಸವನ್ನು ಯತೀಂದ್ರ ಮಾಡುತ್ತಿದ್ದಾರೆ.

ಸಿಎಂ ಮೊದಲ ಪುತ್ರ, ರಾಕೇಶ್ ಸಿದ್ದರಾಮಯ್ಯ ಅವರಿಂದ ಸಿದ್ದರಾಮಯ್ಯಗೆ ಯಾವತ್ತೂ ಮುಜುಗರ ಆಗಿರಲಿಲ್ಲ. ರಾಕೇಶ್ ಸಿದ್ದರಾಮಯ್ಯ ಬದುಕಿದ್ದರೆ ಸಿದ್ದರಾಮಯ್ಯಗೆ ತಗ್ಗಿಸುವ ಸ್ಥಿತಿ ತರುತ್ತಿರಲಿಲ್ಲ. ಅಪ್ಪನ ಅಧಿಕಾರವನ್ನು ಅತಿ ಹೆಚ್ಚು ಯತೀಂದ್ರ ದುರುಪಯೋಗ ಮಾಡಿ ಕೊಂಡಿದ್ದಾರೆ.

ಮಗನಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಯತೀಂದ್ರ ಸೇಲ್ಸ್ ಟ್ಯಾಕ್ಸ್ ಕಡ್ಡಾಯವಾಗಿದೆ.
ಯತೀಂದ್ರ ಅವರೇ ಯಾರಿಗಾಗಿ ಇಷ್ಟು ಆಸ್ತಿ ಮಾಡುತ್ತಿದ್ದೀರಿ? ಮನೆ, ತೋಟ, ಆಸ್ತಿ ಎಲ್ಲಾ ಇದೆ. ನಿಮ್ಮ ಅಣ್ಣನ ಕುಟುಂಬ ಆರ್ಥಿಕವಾಗಿ ಸದೃಢವಾಗಿದೆ. ಇನ್ನೂ ಯಾರಿಗಾಗಿ ಇಷ್ಟು ಆಸ್ತಿ ಮಾಡುತ್ತಿದ್ದೀರಿ ಹೇಳಿ. ಎಲ್ಲರಿಗೂ ಗದರಿಸುವ ಸಿದ್ದರಾಮಯ್ಯ ತಮ್ಮ ಮಗನಿಗೆ ಈ ವಿಚಾರದಲ್ಲಿ ಗದರಿಸಲು ಆಗುತ್ತಿಲ್ಲ, ಮೈಸೂರು ಉಸ್ತುವಾರಿ ಸಚಿವರು ವರ್ಷದಲ್ಲಿ ಮೂರು ದಿನ ಮಾತ್ರ ಕಾಣುತ್ತಾರೆ.

ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ಹಾಗೂ ದಸರಾದಲ್ಲಿ ಅಷ್ಟೆ ಜಿಲ್ಲಾ ಉಸ್ತುವಾರಿ ಸಚಿವರು ಕಾಣುತ್ತಾರೆ. ಇಡೀ ಮೈಸೂರು ಅಭಿವೃದ್ಧಿ ಸತ್ತು ಹೋಗಿದೆ. ವರ್ಗಾವಣೆ ದಂಧೆ ಮೈಸೂರಲ್ಲಿ ದೊಡ್ಡ ಮಟ್ಟದಲ್ಲಿ ಸಾಗಿದೆ. ಯತೀಂದ್ರ ಬಾಯಲ್ಲಿ ಒಂದು ದಿನವಾದರೂ ಮೈಸೂರು ಅಭಿವೃದ್ಧಿ ಮಾತು ಬಂದಿದ್ಯಾ? ನಾಳೆ ಬೆಳಗ್ಗೆ ಬಿಬಿಎಂಪಿ, ಮೈಸೂರು ಪಾಲಿಕೆ ಚುನಾವಣೆ ನಡೆದೆ ಕಾಂಗ್ರೆಸ್ ಧೂಳೀಪಟ ಆಗುತ್ತದೆ.

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ಕಾಂಗ್ರೆಸ್‌ಗೆ ಧೈರ್ಯ ಇಲ್ಲ, ಅಧಿಕಾರ ಹಸ್ತಾಂತರ ಇಲ್ಲ ಎಂಬ ಯತೀಂದ್ರ ಹೇಳಿಕೆ ಅವರ ತಂದೆಯ ಮನದ ಮಾತು. ಸಿದ್ದರಾಮಯ್ಯ ಹೇಳಲು ಆಗದ್ದನ್ನು ಮಗನ‌ ಮೂಲಕ ಹೇಳಿಸುತ್ತಿದ್ದಾರೆ.

ವೀರೇಂದ್ರ ಪಾಟೀಲ್ ನಂತರ ಕಾಂಗ್ರೆಸ್ ಗೆ ರಾಜ್ಯದಲ್ಲಿ ಯಾವ ಸ್ಥಿತಿ ಬಂತೋ ಅದೇ ಸ್ಥಿತಿ ಈಗಲು ಕಾಂಗ್ರೆಸ್ ಗೆ ಬರುತ್ತದೆ.
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭವಿಷ್ಯ ನುಡಿದಿದ್ದಾರೆ.

Continue Reading

Mysore

ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ: ಶ್ರೀ ಗುಂಜಾ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಆರ್‌.ಧರ್ಮಸೇನಾ

Published

on

ತಿ.ನರಸೀಪುರ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗು ಕಾಂಗ್ರೆಸ್ ಪರಿಶಿಷ್ಟ ಜಾತಿ ರಾಷ್ಟ್ರೀಯ ಘಟಕದ ಅಧ್ಯಕ್ಷರಾದ ಆರ್.ಧರ್ಮಸೇನಾ ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

 

ನಂತರ ಮಾತನಾಡಿದ ಅವರು, ಡಿಕೆಶಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಅಪಾರ ರಾಜಕೀಯ ಅನುಭವ ಪಡೆದಿದ್ದು, ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವುದು ಸಂತಸದ ಸಂಗತಿ ಎಂದರು

ಡಿಕೆಶಿ ಅವರು 4 ದಶಕಗಳಿಗೂ ಹೆಚ್ಚು ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಪಡೆದಿದ್ದು, ಅವರಲ್ಲಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ದೂರದೃಷ್ಟಿ ಮತ್ತು ಸಾಮರ್ಥ್ಯವಿದೆ. ಸಂಘಟನಾ ಚತುರರಾಗಿರುವ ಡಿಕೆಶಿ ಅವರು,ಎಲ್ಲ ವರ್ಗದ ಹಿರಿಯ ಮತ್ತು ಕಿರಿಯ ನಾಯಕರ ಸಮತೋಲಿತ ಸಚಿವ ಸಂಪುಟವನ್ನು ರಚಿಸಲಿದ್ದಾರೆ ಎಂದರು.

 

ಹಳೇ ಮೈಸೂರು ಭಾಗದಲ್ಲಿ ಎನ್.ರಾಚಯ್ಯ ಮತ್ತು ಟಿ.ಎನ್.ನರಸಿಂಹಮೂರ್ತಿ ಅವರ ನಂತರ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಿಂದ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ. ಮಾದಿಗ ಸಮುದಾಯಕ್ಕೆ ಯಾವುದೇ ಉನ್ನತ ಹುದ್ದೆಗಳು ಸಿಕ್ಕಿಲ್ಲ. ಹಾಗಾಗಿ ಡಿಕೆಶಿ ಅವರು ಪರಿಶಿಷ್ಟ ಜಾತಿಯಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯಕ್ಕೆ ಪರಿಶಿಷ್ಟ ಜಾತಿ ಕೋಟಾದಲ್ಲಿ ಸಿಂಹಪಾಲು ನೀಡುವ ಸಾಧ್ಯತೆಯಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ರಾಜ್ಯ ಸಂಚಾಲಕ, ವಕೀಲ ರಂಗನಾಥ್ ಪ್ರಸಾದ್, ಮೈಸೂರು ನಗರ ಕಾಂಗ್ರೆಸ್ ಪ.ಜಾತಿ ವಿಭಾಗದ ಅಧ್ಯಕ್ಷ ಕೆ.ರಮೇಶ್, ರಾಜ್ಯ ಸಂಚಾಲಕ ರವಿಪ್ರಕಾಶ್, ವೈದ್ಯರ ವಿಭಾಗದ ಜಿಲ್ಲಾಧ್ಯಕ್ಷ ಡಾ.ಬಿ.ಪ್ರದೀಪ್, ಪ್ರಧಾನ ಕಾರ್ಯದರ್ಶಿಗಳಾದ ಅಭಿನಂದನ್, ಚಿಕ್ಕಣ್ಣ, ಕಾಳಯ್ಯ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ತೇಜಸ್, ಜಿಲ್ಲಾ ಕಾರ್ಯದರ್ಶಿ ಯಡದೊರೆ ಮರಯ್ಯ, ಶಿವರಾಜು, ನಗರ ಮಹಿಳಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ನಿರ್ಮಲ ರಮೇಶ್, ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ, ಬಿ.ಕೆ. ನಾಗರತ್ನಮ್ಮ, ಮುಖಂಡರಾದ ಕೆಬ್ಬೆ ಮಹಾದೇವ ಪ್ರಸಾದ್, ಸಿ.ಮಹದೇವ, ಶ್ರೀಕಾಂತ್ ಇತರರು ಇದ್ದರು.

Continue Reading

Mysore

ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಾಭಿಷೇಕದ ಸಂಭ್ರಮ; ಮೈಸೂರಿನಲ್ಲಿ ಬಸ್ ಪ್ರಯಾಣಿಕರು, ವಾಹನ ಸವಾರರಿಗೆ ಸಿಹಿ ಹಂಚಿದ ಬೆಂಬಲಿಗರು!

Published

on

ಮೈಸೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿರುವ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.

ನಗರದ ಪ್ರಮುಖ ರಸ್ತೆಯಾದ ಚಾಮರಾಜ ಜೋಡಿ ರಸ್ತೆಯಲ್ಲಿ ಜಮಾಯಿಸಿದ ಡಿ.ಕೆ. ಶಿವಕುಮಾರ್ ಅವರ ನೂರಾರು ಬೆಂಬಲಿಗರು, ತಮ್ಮ ನೆಚ್ಚಿನ ನಾಯಕನ ಪರವಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಡಗರ ಪಟ್ಟಿದ್ದಾರೆ. ಅಲ್ಲದೆ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.

ಬಸ್ ಪ್ರಯಾಣಿಕರು, ಸವಾರರಿಗೆ ಸಿಹಿ ವಿತರಣೆ:
ಚಾಮರಾಜ ಜೋಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್‌ಗಳನ್ನು ತಡೆದು, ಒಳಗಿದ್ದ ಪ್ರಯಾಣಿಕರು ಹಾಗೂ ಚಾಲಕ-ನಿರ್ವಾಹಕರಿಗೆ ಅಭಿಮಾನಿಗಳು ಸಿಹಿ ತಿನಿಸಿದರು. ಇದರೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರರು, ಆಟೋ ಚಾಲಕರು ಹಾಗೂ ಸಾರ್ವಜನಿಕರಿಗೂ ಸಿಹಿ ಹಂಚಿ ಸಂತಸ ಹಂಚಿಕೊಂಡರು.

ಡಿಕೆಶಿಗೆ ರಾಜ್ಯದ ಜನರ ಆಶೀರ್ವಾದವಿರಲಿ:
ಬೆಂಬಲಿಗರ ಆಶಯ: “ಕನಕಪುರ ಬಂಡೆ ಎಂದೇ ಖ್ಯಾತರಾಗಿರುವ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಅತ್ಯುನ್ನತ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸುತ್ತಿರುವುದು ಕೋಟ್ಯಂತರ ಕಾರ್ಯಕರ್ತರಿಗೆ ಆನೆ ಬಲ ಬಂದಂತಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಅವರಿಗೆ ಇಡೀ ರಾಜ್ಯದ ಜನರ ಆಶೀರ್ವಾದ ಸದಾ ಇರಬೇಕು. ಸಾರ್ವಜನಿಕರು ಸಿಹಿ ತಿಂದು ನಮ್ಮ ನಾಯಕನನ್ನು ಆಶೀರ್ವದಿಸಬೇಕು,” ಎಂದು ಬೆಂಬಲಿಗರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.

ರಾಜಧಾನಿಯಲ್ಲಿ ನಡೆಯುತ್ತಿರುವ ಪದಗ್ರಹಣ ಮಹೋತ್ಸವದ ರಂಗು ಮೈಸೂರಿನಲ್ಲೂ ಅಷ್ಟೇ ತೀವ್ರವಾಗಿ ಹರಡಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

Continue Reading

Mysore

ಮೈಸೂರಿನಲ್ಲೂ ಡಿ.ಕೆ. ಶಿವಕುಮಾರ್ ಕ್ರೇಜ್: “ಕನಕಪುರದ ಬಂಡೆ, ಮೈಸೂರಿನ ಅಳಿಮಯ್ಯ” ಎಂದು ರಾರಾಜಿಸುತ್ತಿವೆ ಬ್ಯಾನರ್‌ಗಳು!

Published

on

ಮೈಸೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವದ ಆಯ್ಕೆ ಪ್ರಕ್ರಿಯೆ ಮುಗಿದು, ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬೆನ್ನಲ್ಲೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಜೈಕಾರ ಮತ್ತು ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಮೈಸೂರಿನ ಕಾಂಗ್ರೆಸ್ ಕಚೇರಿಯ ಸುತ್ತಮುತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್‌ಗಳು ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ.

ಗಮನ ಸೆಳೆಯುತ್ತಿದೆ “ಮೈಸೂರಿನ ಅಳಿಮಯ್ಯ” ಶೀರ್ಷಿಕೆ! ಅಭಿಮಾನಿಗಳು ಹಾಕಿರುವು ಬ್ಯಾನರ್‌ಗಳಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು “ಕನಕಪುರದ ಬಂಡೆ, ಮೈಸೂರಿನ ಅಳಿಮಯ್ಯ” ಎಂದು ವಿಶೇಷವಾಗಿ ಉಲ್ಲೇಖಿಸಲಾಗಿದೆ. ಮೈಸೂರು ಭಾಗದೊಂದಿಗೆ ಡಿಕೆಶಿ ಹೊಂದಿರುವ ಕೌಟುಂಬಿಕ ಸಂಬಂಧವನ್ನು ಈ ಮೂಲಕ ಅಭಿಮಾನಿಗಳು ಹೆಮ್ಮೆಯಿಂದ ಬಿಂಬಿಸುತ್ತಿದ್ದು, ಈ ಬ್ಯಾನರ್‌ಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.

ಕಾಂಗ್ರೆಸ್ ಕಚೇರಿಯಲ್ಲಿ ಎಲ್‌ಇಡಿ (LED) ಪರದೆ ವ್ಯವಸ್ಥೆ ಬೆಂಗಳೂರಿನಲ್ಲಿ ನಡೆಯಲಿರುವ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಮೈಸೂರಿನ ಜನತೆ ಲೈವ್ ಆಗಿ ವೀಕ್ಷಿಸಲು ಮೈಸೂರು ಕಾಂಗ್ರೆಸ್ ಸಮಿತಿ ವಿಶೇಷ ವ್ಯವಸ್ಥೆ ಮಾಡಿದೆ. ನಗರದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬೃಹತ್ ಎಲ್‌ಇಡಿ (LED) ಪರದೆಗಳನ್ನು ಅಳವಡಿಸಲಾಗುತ್ತಿದೆ.

ಸಿಬ್ಬಂದಿಗಳು ಈಗಾಗಲೇ ಎಲ್‌ಇಡಿ ಸ್ಕ್ರೀನ್ ಅಳವಡಿಕೆ ಮತ್ತು ಆಸನಗಳ ವ್ಯವಸ್ಥೆ ಮಾಡುವಲ್ಲಿ ಬ್ಯುಸಿಯಾಗಿದ್ದಾರೆ. “ನಮ್ಮ ನಾಯಕರ ಪ್ರಮಾಣ ವಚನವನ್ನು ಹಬ್ಬದಂತೆ ಆಚರಿಸಲಿದ್ದೇವೆ” ಎಂದು ಸ್ಥಳೀಯ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಮೆಗಾ ಸಂಭ್ರಮಾಚರಣೆಗೆ ಸಿದ್ಧತೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಮೈಸೂರಿನಾದ್ಯಂತ ಭರ್ಜರಿ ವಿಜಯೋತ್ಸವ ಆಚರಿಸಲು ಡಿಕೆಶಿ ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸುವುದು, ಸಿಹಿ ಹಂಚುವುದು ಸೇರಿದಂತೆ ಸಾಂಸ್ಕೃತಿಕ ನಗರಿಯಲ್ಲೂ ಕಾಂಗ್ರೆಸ್ ಗ್ಯಾರಂಟಿ ಸಂಭ್ರಮ ಮನೆಮಾಡಿದೆ.

Continue Reading

Trending

error: Content is protected !!