Hassan
ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ನಿರ್ಣಯ
ವಸ್ತ್ರ ಧರಿಸುವ ಕುರಿತು ನಾಮಫಲಕ ಬಿಡುಗಡೆ: ಚಂದ್ರಮೊಗವೀರ
ಹಾಸನ: ದೇವಾಲಯಗಳನ್ನು ಧಾರ್ಮಿಕ ಕೇಂದ್ರಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೆ ತರಲು ನಾವುಗಳು ನಿರ್ಣಯವನ್ನು ತೆಗೆದುಕೊಂಡಿದ್ದು, ದೇವಾಲಯಗಳ ಬಳಿ ನಾಮಫಲಕವನ್ನು ಹಾಕುವುದಾಗಿ ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡದ ಉಸ್ತುವಾರಿ ಚಂದ್ರಮೊಗವೀರ ತಿಳಿಸಿದರು.
ನಗರದ ಗಾಂಧಿ ಬಜಾರ್ ಬಳಿ ಇರುವ ಶ್ರೀ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ನಾಮಫಲಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜೈನ್ ನ ಶ್ರೀ ಮಹಾಕಾಲೇಶ್ವರ ದೇವಸ್ಥಾನ, ವಾರಾಣಸಿಯ ಶ್ರೀಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತಿಕ ವಸ್ತ್ರ ಸಂಹಿತೆ ಜಾರಿಯಿದೆ ಎಂದರು. ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಧಾರ್ಮಿಕ ಪರಿಷತ್ ಸಹ ರಾಜ್ಯದ ೨೧೧ ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿತ್ತು. ಈಗಾಗಲೇ ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ಧ ದೇವಿರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರಸಂಹಿತೆ ಜಾರಿ ಮಾಡಿದೆ. ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಟೀವೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಅದರ ಆಧಾರದಲ್ಲಿ ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡುವುದಕ್ಕಾಗಿ, ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ – ಮಹಾಸಂಘದ ಅಧಿವೇಶನದಲ್ಲಿ ರಾಜ್ಯದ ೫೦೦ ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮತ್ತು ಹಾಸನದ ೩೦ ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಪ್ರತೀ ದೇವಸ್ಥಾನಗಳ ಮುಂಭಾಗದಲ್ಲಿ ವಸ್ತ್ರ ಸಂಹೀತೆಯ ಫಲಕಗಳನ್ನು ಹಾಕಿ ಜನಪ್ರಭೋಧನೆ ಮಾಡುವುದು, ದೇವಸ್ಥಾನದ ಪಾವಿತ್ಯತೆಯ ರಕ್ಷಣೆ ಮತ್ತು ಭಾರತೀಯ ಸಂಸ್ಕೃತಿಯ ಪಾಲನೆಯಾಗುವ ಉದ್ದೇಶದಿಂದ ದೇವಸ್ಥಾನಕ್ಕೆ ಬರುವ ಭಕ್ತರು ತುಂಡು ಬಟ್ಟೆ ಧರಿಸುವ ಬದಲು, ಭಾರತೀಯ ಸಂಸ್ಕೃತಿಯ ಪಾಲನೆ ಮಾಡಿ ದೇವಸ್ಥಾನ ವ್ಯವಸ್ಥಾಪನೆಗೆ ಸಹಕರಿಸಲು ಜನಜಾಗೃತಿ ಮೂಡಿಸಲಾಗುವುದು. ಭಾರತೀಯ ಸಾತ್ವಿಕ ಉಡುಪುಗಳು : ಮಹಿಳೆಯರು ಚುಡಿದಾರ, ಲಂಗ-ದಾವಣಿ, ಸಲ್ವಾರ್-ಕುರ್ತಾ ಜೊತೆಗೆ ಸೀರೆ, ಓಡಾಣಿ ಮುಂತಾದ ಪಾರಂಪರಿಕ ಸಾತ್ವಿಕ

ವೇಷಭೂಷಣಗಳನ್ನು ಧರಿಸಬೇಕು ಮತ್ತು ಪುರುಷರು ಕುರ್ತಾ, ಧೋತಿ, ಲುಂಗಿ ಅಥವಾ ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್ಗಳನ್ನು ಹಾಕಬೇಕು. ಆಧುನಿಕ ಅಸಾತ್ವಿಕ ಉಡುಪುಗಳು : ಪಾಶ್ಚಿಮಾತ್ಯ ಉಡುಪುಗಳಲ್ಲಿ ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್ ಸ್ಕರ್ಟ್, ಸ್ಟೀವೆಸ್ ಡ್ರೆಸ್, ನೈಟ್ ಡ್ರೆಸ್, ಸಾಕ್ಸ್ ಇತ್ಯಾದಿ ಉಡುಪುಗಳನ್ನು ಹಾಕಬಾರದೆಂದು ಮನವಿ ಮಾಡಿದರು. ದೇವಸ್ಥಾನಗಳನ್ನು ಧರ್ಮಪ್ರಚಾರ ಕೇಂದ್ರವನ್ನಾಗಿ ಮಾಡುವುದು : ದೇವಸ್ಥಾನಗಳ ಸಂರಕ್ಷಣೆ, ಸಂಘಟನೆಯ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಸ್ಥರದ ಅಧಿವೇಶನಗಳನ್ನು ಮಾಡಿ, ದೇವಸ್ಥಾನಗಳ ಸಂಘಟನೆ ಮಾಡಲಾಗುವುದು. ಅದಲ್ಲದೇ ಹಿಂದೂ ಸಮಾಜಕ್ಕೆ ಹಿಂದೂ ಧರ್ಮದ ಬಗ್ಗೆ ಶಿಕ್ಷಣ ನೀಡಲು ಮುಂದಿನ ದಿನಗಳಲ್ಲಿ ರಾಜ್ಯದ ೫೦ ದೇವಸ್ಥಾನಗಲ್ಲಿ ಮಕ್ಕಳು, ಸ್ತ್ರೀ-ಪುರುಷರಿಗೆ ನಿಯಮಿತಿವಾಗಿ ಹಿಂದೂ ಧರ್ಮದ ಶಿಕ್ಷಣ ನೀಡುವ ವರ್ಗಗಳು ಸಹ ಪ್ರಾರಂಭ ಮಾಡಲಾಗುವುದು. ಇದಕ್ಕೆ ಸಂಬಂದಿಸಿ ಒಂದು ಪಠ್ಯಕೃಮವನ್ನು ಸಹ ರಚಿಸಲಾಗಿದೆ. ಈಗಾಗಲೇ ರಾಜ್ಯದ ೩೦೦ ಸ್ಥಳಗಳಲ್ಲಿ ಈ ವರ್ಗ ಪ್ರಾರಂಭಿಸಲಾಗಿದೆ. ಮುಂದೆ ಪ್ರತಿ ದೇವಸ್ಥಾನಗಳಲ್ಲಿ ಹಿಂದೂ ಧರ್ಮ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದರು. ಇದಲ್ಲದೇ ಕರ್ನಾಟಕದಲ್ಲಿ ಮಾನ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರನ್ನು ಈಗಾಗಲೇ ಭೇಟಿ ಮಾಡಿ ಸರಕಾರಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ, ಧರ್ಮ ಶಿಕ್ಷಣ ಫಲಕಗಳನ್ನು ಅಳವಡಿಸಲು ಮನವಿ ನೀಡಲಾಗಿದೆ. ಮಾನ್ಯ ಸಚಿವರು ಈ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ ನಲ್ಲಿ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಶ್ರೀ ರಾಘವಚಾರ್ ಮಾತನಾಡಿ, “ವಸ್ತ್ರ ಸಂಹಿತೆಯೂ ಅನಾದಿ ಕಾಲದಿಂದಲೂ ಇದ್ದು, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ ಇದರಲ್ಲಿ ಚ್ಯುತಿ ಬಂದಿದ್ದು ಈಗ ಹಿಂದೂಗಳು ಜಾಗೃತರಾಗಿ ಎಲ್ಲಾ ದೇವಸ್ಥಾನಗಳಲ್ಲೂ ಜಾರಿ ಮಾಡಬೇಕಾಗಿದೆ” ಎಂದು ಕಳಕಳಿ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದ ಟ್ರಸ್ಟಿಗಳಾದ ನಾಗೇಶ್, ಉತ್ತರ ಉತ್ತಿಷ್ಠ ಗಣಪತಿ ದೇವಸ್ಥಾನದ ಟ್ರಸ್ಟಿಗಳಾದ ರಾಘವೇಂದ್ರ ಆಚಾರ್, ರಾಜ ವೆಂಕಟೇಶ್ ಕಾಳಿಕಾಂಬ ದೇವಸ್ಥಾನ ಧರ್ಮದರ್ಶಿಗಳು, ವಿಜಯಲಕ್ಷ್ಮಿ ದೇವಸ್ಥಾನದ ಧರ್ಮದರ್ಶಿಗಳಾದ ಶಶಿಧರ್, ಕೋಟೆಬಾಗಿಲು ಆಂಜನೇಯ ದೇವಸ್ಥಾನದ ಧರ್ಮದರ್ಶಿ ಲವ ಕುಮಾರ್, ಶ್ರೀಪ್ರಸನ್ನ ಗಣಪತಿ ದೇವಸ್ಥಾನದ ಧರ್ಮದರ್ಶಿ ನಾಗೇಂದ್ರ, ಸುಬ್ರಹ್ಮಣ್ಯ ದೇವಸ್ಥಾನ ಧರ್ಮ ದರ್ಶಿಗಳಾದ ಗೋವಿಂದರಾಜು ಸೇರಿದಂತೆ ಹಲವಾರು ದೇವಸ್ಥಾನದ ಟ್ರಸ್ಟಿಗಳು ಇದೆ ವೇಳೆ ಉಪಸ್ಥಿತಿ ಇದ್ದರು.

Hassan
ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಸಮಾರಂಭ
ಹಾಸನ: ಸರ್ವಗುಣ ಯೋಗಿ ಎನಿಸಿಕೊಂಡಿರುವ ರಾಷ್ಟ್ರಕವಿ ಕುವೆಂಪು ಅವರ ಬರಹವನ್ನು ಯುವಕರು ಓದುವ ಮೂಲಕ ಭಾರತೀಯ ಆಧ್ಯಾತಿಕ, ಸಾಂಸ್ಕೃತಿಕ ಪರಂಪರೆಯನ್ನು ಅರಿಯಬೇಕೆಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್, ಅಮೋಘ ಸುದ್ದಿ ವಾಹಿನಿ ಸಹಯೋಗದಲ್ಲಿ ಬೆಂಗಳೂರಿನ ಮನೋಜ್ಞ ನೃತ್ಯಕಲಾ ಅಕಾಡೆಮಿ ವತಿಯಿಂದ ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಹಮಿಕೊಂಡಿದ್ದ ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಸಮಾರಂಭದಲ್ಲಿ ಮಾತನಾಡಿದರು.

ಕುವೆಂಪು ಅವರನ್ನು ಎಲ್ಲರಿಗೂ ಪರಿಚಯಿಸಬೇಕಿದೆ. ಸಾಂಸ್ಕೃತಿಕ, ಆಧ್ಯಾತಿಕವಾಗಿ ಭಾರತ ಸಾಕಷ್ಟು ಖ್ಯಾತಿ ಹೊಂದಿದೆ. ಪುರಾತನ ಪರಂಪರೆ ಬಗ್ಗೆ ವಿಶ್ವವೇ ಅಚ್ಚರಿ ವ್ಯಕ್ತಪಡಿಸುತ್ತದೆ. ಅಂತಹ ಶಕ್ತಿಯನ್ನು ಸಾಹಿತ್ಯದ ಮೂಲಕ ಪರಿಚಯಿಸಿಕೊಟ್ಟವರು ರಾಷ್ಟ್ರಕವಿ ಕುವೆಂಪು ಎಂದರು.
ಮನುಷ್ಯ ಚಿಂತನೆಗಲ್ಲಿ ಭಾವ ಹಾಗು ಅಭಾವ ಮುಖ್ಯವಾಗುತ್ತದೆ. ಯಾವುದನ್ನೇ ಆಗಲಿ ಭಾವದಿಂದ ನೋಡಬೇಕೆ ಹೊರತು ಅಭಾವದಿಂದ ಅಲ್ಲ. ಋಷಿಗಳಿಗೆ ನೋಡಿದ್ದೆಲ್ಲ ಭಾವವಾಗಿ ಕಾಣುತ್ತದೆ. ಆದ್ದರಿಂದಲೇ ಅವರು ಅಸಾಧ್ಯವಾದುದನ್ನು ಸಾಧಿಸಿದ್ದಾರೆಂದರು.
ಭಾವನೆಗಳು ಬದಲಾದರೆ ಮನುಷ್ಯರಾಗಲು ಸಾಧ್ಯವಿಲ್ಲ. ಮನುಷ್ಯ ಭಾವನೆಗಳನ್ನು ಹೊಂದಬೇಕು. ವ್ಯಕ್ತಿಯ ಚಿಂತನಾ ಲಹರಿ ಆಳಕ್ಕಿಳಿಯಬೇಕೆಂದರೆ ಕುವೆಂಪು ಸಾಹಿತ್ಯ ಓದಬೇಕು. ಮರಣ ಇಲ್ಲದ ವಸ್ತು ಎಂದರೆ ಪುಸ್ತಕ ಮಾತ್ರ. ಭಗವಂತ ಕೊಟ್ಟ ಸುಂದರ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ಸತ್ಕಾರ್ಯಗಳಲ್ಲಿ ನಮನ್ನು ನಾವು ತೊಡಗಿಸಿಕೊಳ್ಳಬೇಕೆಂದರು.

ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ, ಸಾಹಿತಿ ಪ್ರೊ. ಡಾ. ಜಯಪ್ರಕಾಶ್ ಗೌಡ ಅವರು ಮಾತನಾಡಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ನಾಡಿನ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಸಾಹಿತ್ಯ, ಆಧ್ಯಾತ ಹಾಗು ವೈಜ್ಞಾನಿಕತೆಗೆ ಪ್ರೋತ್ಸಾಹ ನೀಡಿದ್ದರೆಂದರು.
ಕುವೆಂಪು ಅವರನ್ನು ನೃತ್ಯದ ಮೂಲಕ ಅರಿಯಬೇಕೆಂದು ಹಾಸನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಪ್ರೌಢ ಶಾಲಾ ಹಂತದಿಂದಲೇ ನೃತ್ಯದ ಮೂಲಕ ಗಮನ ಸೆಳೆದ ಡಾ. ಮಾನಸಾ ಅವರು ಬಿಇ ಪದವಿ ಪಡೆದು ಪಿಹೆಚ್.ಡಿ. ಕೂಡ ಮಾಡಿದ್ದಾರೆ. ರಾಜ್ಯ ಮಾತ್ರವಲ್ಲದೆ ಅನೇಕ ಕಡೆ ನೃತ್ಯ ಕಾರ್ಯಕ್ರಮಗಳ ಮೂಲಕ ಕುವೆಂಪು ಅವರನ್ನು ರಾಷ್ಟ್ರಕ್ಕೆ ಪರಿಚಯಿಸುತ್ತಿದ್ದಾರೆಂದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ, ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಶಿವರಾಮೇಗೌಡ ಮಾತನಾಡಿದರು.

ವಿಜಯ ಸ್ಕೂಲ್‌ನ ತಾರಾ ಎಸ್. ಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಾಗೂರು ಕೃಷ್ಣೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ನಗರಸಭೆ ಮಾಜಿ ಅಧ್ಯಕ್ಷ ಡಾ. ಹೆಚ್.ಎಸ್.ಅನಿಲ್ ಕುಮಾರ್, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್ ಅಧ್ಯಕ್ಷ ನಿಶ್ಚಯ್ ಧನಪಾಲ್ ಜೈನ್, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ರಘು, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಮತ್ತಿತರರಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್.ಬಿ.ಮದನಗೌಡ ಸ್ವಾಗತಿಸಿದರು.
Hassan
ಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮ*ತ್ಯೆ
ಬೇಲೂರು : ಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ತಾಲೂಕಿನಲ್ಲಿ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಮೇಶ್ ಆತ್ಮಹತ್ಯೆ ಮಾಡಿಕೊಂಡ ರೈತ ಬೇಲೂರು ತಾಲೂಕಿನ ಹಳೇಬೀಡುಸೋ ಸಮೀಪದ ಗೋಣಿ ಸೋಮೇನಹಳ್ಳಿ ಗ್ರಾಮದ ರೈತ. ಕಳೆದ ಹತ್ತು ವರ್ಷಗಳ ಹಿಂದೆ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕುಗಳಲ್ಲಿ ಕೃಷಿಗಾಗಿ ಮಾಡಿ ಕೊಂಡಿದ್ದ ಸಾಲವನ್ನ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕಿನಲ್ಲಿ ಸಾಲ ಮಾಡಿ ಹಣದಿಂದ ಕೃಷಿ ಚಟುವಟಿಕೆ ಮಾಡಿದ್ದು ಅತಿವೃಷ್ಟಿ ಮತ್ತು ಅನಾವೃಷ್ಟಿಗಳ ನಡುವೆ, ಸರಿಯಾದ ಬೆಂಬಲ ಬೆಲೆ ಸಿಗದೇ ಹಿನ್ನೆಲೆ, ನಷ್ಟವನ್ನ ಅನುಭವಿಸಿತು ಬ್ಯಾಂಕ್ ಮತ್ತು ಕೈ ಸಾಲ ಸೇರಿಸುಮಾರು 20 ಲಕ್ಷದ ತನಕ ಸಾಲ ಮಾಡಿದ್ದ ಎನ್ನಲಾಗಿದೆ.

ಮನೆ ಕೆನರಾ ಬ್ಯಾಂಕ್ ಸಿಬ್ಬಂದಿಗಳು ಮನೆ ಜಪ್ತಿ ಮಾಡಲು ಬಂದಾಗ ತನಗಿದ್ದ ಜಮೀನನ್ನ ಮಾರಾಟ ಮಾಡಿ ಬಡ್ಡಿ ರಹಿತ ಸಾಲ ಪಾವತಿಸಿದ. ಅಲ್ಲದೆ ಕೈ ಸಾಲ ಮತ್ತು ಮತ್ತೊಂದು ಬ್ಯಾಂಕಿನಲ್ಲಿ ಸಾಲ ಪಡೆದಿದ್ದು, ಜಮೀನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಮುಂದೆ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ ಎಂದು ಯೋಚಿಸಿ ಎಂದು ಬೆಳಗ್ಗೆ, ತನ್ನ ಜಮೀನಿನ ಪಕ್ಕದ ದಿನೇಶ್ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ತೇಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಈ ಸಂಬಂಧ ಹಳೆಬೀಡು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Hassan
ಅಸಹಾಯಕ ಮಹಿಳೆಗೆ ಧಮ್ಕಿ ಹಾಕಿದ ಎಎಸ್ಐ ದೇವರಾಜ್
ಅರಕಲಗೂಡು: ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿರುವ ಅರ್ಪಿತ ಎಂಬುವವರು ಸಹಾಯಕ್ಕಾಗಿ 112 ಕರೆ ಮಾಡಿದರೆ ಸಮಯಕ್ಕೆ ಸರಿಯಾಗಿ ವಾಹನ ಬಾರದೇ ಇದ್ದರಿಂದ ಪೊಲೀಸ್ ಠಾಣೆಗೆ ಕರೆ ಮಾಡಿದ್ದರು. ಆಗ ಎಎಸ್ಐ ದೇವರಾಜ್ ಸ್ಥಳಕ್ಕೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಏನಿದು ಘಟನೆ?
ಅಸಹಾಯಕ ಅರ್ಪಿತಾ ಅವರ ಅತ್ತೆ ಭಾಗ್ಯಮ್ಮ, ಅತ್ತಿಗೆ ಗೀತಾ, ನಾದಿನಿ ಜ್ಯೋತಿ, ಬಾವ ಲೋಕೇಶ್ ಎಲ್ಲಾ ಸೇರಿ ಗಂಡ ಇಲ್ಲದ ವೇಳೆ ಅವರ ಮೇಲೆ ದಾಳಿ ಮಾಡಿದ್ದರು. ಅಲ್ಲದೇ ಮನೆಯ ಮಹಡಿಯ ಮೇಲೆ ವಾಸವಿದ್ದ ಅವರ ಮನೆಗೆ ಬೀಗ ಹಾಕಿ ಅವರನ್ನು ಮನೆ ಇಂದ ಹೊರ ಹಾಕುವ ಪ್ರಯತ್ನ ಮಾಡಿದ್ದರು.
ಅರ್ಪಿತಾ ಅವರಿಗೆ ಪ್ರೀತಿಸಿ 5 ವರ್ಷದ ಹಿಂದೆ ಮದುವೆ ಆಗಿತ್ತು. ಆದರೆ ಒಂದು ವರ್ಷದಿಂದ ಚೆನ್ನಾಗಿ ನೋಡಿಕೊಳ್ಳದೆ ಹೆಂಡತಿ ಇದ್ದರಿಂದ ಗಂಡನಿಂದ ದೂರ ಉಳಿದ್ದರು. ಇದೀಗ ಅರ್ಪಿತಾ ಅವರನ್ನು ಮನೆ ಖಾಲಿ ಮಾಡಿಸೋದಕ್ಕೆ ಅವರ ಅತ್ತೆ ಬಂದಿದ್ದಾರೆ.

ಈ ವೇಳೆ ಪೊಲೀಸರು ಆಕೆಯ ಸಹಾಯಕ್ಕೆ ಬಾರದೇ ಹಲ್ಲೆ ಮಾಡಿದವರ ಜೊತೆ ಸೇರಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಈ ಹಲ್ಲೆಗೊಳಗಾದ ಅಸಹಾಯಕ ಮಹಿಳೆ ದೂರು ತೆಗೆದುಕೊಳ್ಳಲು ಎಎಸ್ಐ ದೇವರಾಜ್ ನಿರಾಕರಿಸಿದ್ದಾರೆ. ಆ ಅಸಹಾಯಕ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ, ನ್ಯಾಯ ಸಿಗದೇ ಕಣ್ಣೀರು ಹಾಕಿಕೊಂಡು ತನ್ನ ಅಳಲನ್ನು ತೋಡಿಕೊಂಡು ಬೀದಿಗೆ ಬಿದ್ದಿದ್ದಾರೆ.

ಈ ಸಂತ್ರಸ್ಥೆಯೂ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Chamarajanagar13 hours agoನಾನಂಥವನಲ್ಲಾ ಎಂದ ನಂದಕುಮಮಾರ್: ಚಾಮರಾಜನಗರ ಹಿರಿಕಾಟಿ ಕ್ರಷರ್ ವಿವಾದಕ್ಕೆ ಸ್ಪಷ್ಟನೆ
-
Hassan11 hours agoಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮ*ತ್ಯೆ
-
Kodagu11 hours agoಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ಸಾತ್ವಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ : ಡಿವೈಎಸ್ಪಿ ಮಹೇಶ್ ಕುಮಾರ್
-
Uncategorized4 hours agoದಿ. ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ಕಾರ್ ರೇಸ್ : ಕುಚುಕು ಗೆಳೆಯ ನನ್ನ ನೆನೆದ ಸಂಸದ ಸುನಿಲ್ ಬೋಸ್
-
Kodagu5 hours agoಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ
-
Kodagu5 hours agoಮಂಗಳವಾರ ಬ್ಯಾಡಗೊಟ್ಟ ಪಂಚಾಯತ್ ನ ನೂತನ ಕಟ್ಟಡ ಉದ್ಬಾಟನೆ
-
Uncategorized5 hours agoಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ
-
State5 hours agoಬೆಸ್ಕಾಂನಲ್ಲಿ 520 ಹುದ್ದೆಗಳಿಗೆ ನೇರ ನೇಮಕಾತಿ!
