Chikmagalur
ಯೋಗದಿಂದ ಅರೋಗ್ಯ ಪೂರ್ಣ ಬದುಕು. ಬಿ. ಎಂ. ಜಗತ್
ಮೂಡಿಗೆರೆ. ಜನ್ನಾಪುರ ಹೊಯ್ಸಳ ಕ್ರೀಡಾಂಗಣದಲ್ಲಿ ಏರ್ಪಡಿಸಿದ ಯೋಗ ದಿನಾಚರಣೆಯಲ್ಲಿ ಯೋಗದಿಂದ ಅರೋಗ್ಯ ರಕ್ಷಣೆ ಸಾಧ್ಯ ಭಾರತದ ಯೋಗ ವನ್ನು ವಿಶ್ವವೇ ಒಪ್ಪಿ ಕೊಂಡಿದ್ದು ಅರೋಗ್ಯ ಪೂರ್ಣ ಬದುಕು ಕಟ್ಟಿ ಕೊಳ್ಳಲು ಯೋಗ ಅತ್ಯ ಅಮೂಲ್ಯ ಎಂದು ಜೇಸಿಐ ಗೋಣಿಬೀಡು ಹೊಯ್ಸಳ ಸಂಸ್ಥೆ ಕಾರ್ಯದರ್ಶಿ ಬಿ.ಎಂ. ಜಗತ್ ತಿಳಿಸಿದರು.

ಇಂದು ಜೇಸಿಐ ಗೋಣಿಬೀಡು ಹೊಯ್ಸಳ ಹಾಗೂ ಹೊಯ್ಸಳ ಪ್ರೌಢ ಶಾಲೆ ಇವರ ವತಿಯಿಂದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರಿಯ ಯೋಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಸಿ ಪ್ರಪಂಚವು ಭಾರತದ ಆದರ್ಶಗಳನ್ನು ಅಳವಡಿಸಿಕೊಳ್ಳಲು ಹಂಬಲಿಸುತ್ತಿದ್ದು ಅದರಲ್ಲಿ ಯೋಗ ಶಿಕ್ಷಣ ಮುಂಚೂಣಿಯಲ್ಲಿದೆ. ಅವುಗಳನ್ನು ನಾವು ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬಾಳೋಣ,ಒತ್ತಡದ ನಡುವೆ ಬದುಕುತ್ತಿರುವ ನಮಗೆಲ್ಲ ಯೋಗ ಮಾನಸಿಕ ಸ್ಟೈರ್ಯ ಮತ್ತು ಪರಿಸ್ಥಿತಿ ಯನ್ನು ಎದುರಿಸುವ ಶಕ್ತಿ ನೀಡುತ್ತದೆ ಎಂದು ಕರೆ ನೀಡಿದರು .

ಹೊಯ್ಸಳ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶ್ರೀಮತಿ ವೇಣಿ ಮಾತನಾಡಿ ಪ್ರತಿಯೊಬ್ಬರು ಯೋಗವನ್ನು ಕಲಿಯುವ ಅಗತ್ಯ ವಿದೆ. ನಾವು ಉಪಯೋಗಿಸುತ್ತಿರುವ ಆಹಾರ. ಉಸಿರಾಡುತ್ತಿರುವ ಗಾಳಿ. ಕುಡಿಯುವ ನೀರು ಎಲ್ಲವೂ ಕಲುಷಿತ ಗೊಳುತ್ತಿರುವ ಸಂಕಿರ್ಣ ಕಾಲಘಟ್ಟ ಇದಾಗಿದೆ. ಇಂತಹ ಹೊತ್ತಿನಲ್ಲಿ ನಾವು ಯೋಗ ವನ್ನು ಕಲಿಯುವ ಮೂಲಕ ಸಾಧ್ಯ ವಾದಷ್ಟು ಅರೋಗ್ಯ ರಕ್ಷಣೆ ಮಾಡಿ ಕೊಳ್ಳಬೇಕು ಎಂದರು.

ಯೋಗದಿನಾಚರಣೆಯಲ್ಲಿ ಶಿಕ್ಷಕ ಶಿವಕುಮಾರ್. ಶಿಕ್ಷಕಿ ಆಶಿಕಾ. ಹಾಗೂ ವಿದ್ಯಾರ್ಥಿಗಳು. ಜೇಸಿಐ ಸಂಸ್ಥೆ ಪದಾಧಿಕಾರಿಗಳು ಭಾಗವಹಿಸಿದ್ದರು.
ವರದಿ
ಸಿ ಎಲ್ ಪೂರ್ಣೇಶ್ ಚಕ್ಕೂಡಿಗೆ
Chikmagalur
ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು
ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಒಬ್ಬರು ಮೃತಪಟ್ಟಿದ್ದಾರೆ.
ಅಡಿಕೆ ಮರದಲ್ಲಿ ಗೊನೆ ಕೊಯ್ಯುವಾಗ ಬಿದ್ದು ಸಾವಪ್ಪಿದ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ.
ಮಂಜು (35) ಮೃತ ದುರ್ದೈವಿ. ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ಮಂಜು ಮರ ಹತ್ತಿ ಗೊನೆ ಕೊಯ್ಯುವಾಗ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.
ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikmagalur
ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡಿದ ಕೆ.ಎಸ್.ಗೋಪಾಲಕೃಷ್ಣ
ಚಿಕ್ಕಮಗಳೂರು: ಶ್ರೀ ಬೀರಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಕೆಂಪನಹಳ್ಳಿ ಕನಕ ಗೆಳೆಯರ ಬಳಗದಿಂದ ನಗರ ಸಮೀಪ ಆಯೋಜಿಸಿದ್ಧ ಎರಡನೇ ವರ್ಷದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಬುಧವಾರ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದು, ಪ್ರಥಮ ಹಾ ಗೂ ದ್ವಿತೀಯ ಹೆಚ್.ಎಫ್. ಡಿಲಕ್ಸ್ ಬೈಕ್, ತೃತೀಯ 25 ಸಾವಿರ ನಗದು ಟ್ರೋಫಿ ಮತ್ತು ಚತುರ್ಥ ವಿಜೇತರಿಗೆ 20 ಸಾವಿರ ನಗದು ಆಕರ್ಷಕ ಟ್ರೋಫಿ ವಿತರಿಸಲಾಗುವುದು ಎಂದು ಸ್ಪರ್ಧೆಯ ಆಯೋಜಕ ಕೆಂಪನಹಳ್ಳಿ ಸುನೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಂಜುಳಾ ಲಕ್ಷ್ಮಣ್, ಎಲ್.ಬಿ.ಎಸ್. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರತೀಪ್, ಕೆಂಪನಹಳ್ಳಿ ಗ್ರಾಮಸ್ಥರಾದ ಚರಣ್, ಹರೀಶ್, ರಾಕೇಶ್, ಶಶಾಂಕ್, ಸಚಿನ್, ಕಾರ್ತೀಕ್ , ವರುಣ್, ಡಿಂಪು, ವಸಂತ್, ದರ್ಶನ್ ಮತ್ತಿತರರು ಹಾಜರಿದ್ದರು.
Chikmagalur
ಅಸ್ಸಾಂನಿಂದ ಬಂದಿರುವ ಕಾರ್ಮಿಕನಿಂದ ಕಾಫಿ ತೋಟದಲ್ಲಿ ಗೋ ಹತ್ಯೆ
ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಗೋ ಹತ್ಯೆ ಮಾಡಿದ ಘಟನೆ ನಡೆದಿದ್ದು, ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿರುವ ಕಾರ್ಮಿಕರಿಂದ ಕೃತ್ಯ ನಡೆದಿದೆ.
ಗೋವುಗಳನ್ನು ಕದ್ದು ತೋಟದಲ್ಲಿ ಹತ್ಯೆ ಮಾಡಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದ್ದು ಆರೋಪಿಗಳು-ಗೋಮಾಂಸ ಪಕ್ಷಕ್ಕೆ ಪಡೆಯಲಾಗಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರಿನ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು,ಎರಡು ದನಗಳನ್ನು ಹತ್ಯೆ ಮಾಡಿ, ಮಾಂಸ ಹಂಚಿಕೆ ವೇಳೆಯಲ್ಲಿ ದಾಳಿ ಆಗಿದೆ.

ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿಆರೋಪಿಗಳಾದ ಅನ್ಸರ್, ಮಜೀದ್, ಮುಜಾಮಿಲ್ ನನ್ನು ಬಂಧಿಸಿದ್ದಾರೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
-
Kodagu5 hours agoಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಎಸ್ಟಿ ಮೋರ್ಚಾ ಅಸಮಾಧಾನ
-
Chamarajanagar19 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
Kodagu18 hours agoಪ್ರಧಾನಿ ಬಗ್ಗೆ ಅವಹೇಳನ – ಮಡಿಕೇರಿಯ ಮೂವರ ಬಂಧನ
-
State19 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Hassan21 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Chamarajanagar21 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು
-
Hassan22 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Special18 hours ago14.21 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ: ರಾಜ್ಯ ಸರ್ಕಾರದ ಮಹತ್ವದ ಘೋಷಣೆ
