Mysore
ಚೈನ್ ಕಳ್ಳ ಹಿಡಿದ ಯುವಕನ ಮೇಲೆಯೇ ಹ*ಲ್ಲೆ! ಮೈಸೂರಿನಲ್ಲಿ ಆ*ಕ್ರೋಶ
ಮೈಸೂರು: ಯುವತಿಯೊಬ್ಬರ ಚೈನ್ ಕದಿಯಲು ಯತ್ನಿಸಿದ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದ ಸ್ಥಳೀಯ ಯುವಕನ ಮೇಲೆಯೇ ಹಲ್ಲೆ ನಡೆಸಿರುವ ಆರೋಪ ಮೈಸೂರಿನಲ್ಲಿ ಕೇಳಿಬಂದಿದೆ. ಮೈಸೂರಿನ ಜೆ.ಪಿ. ನಗರದ ಕವಿತಾ ಬೇಕರಿ ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಯುವತಿಯ ಚೈನ್ ಕದಿಯಲು ಯತ್ನಿಸಿದ ಯುವಕನನ್ನು ಸ್ಥಳೀಯ ನಿವಾಸಿ ಪುನೀತ್ ಎಂಬುವವರು ಹಿಡಿದು ವಿದ್ಯಾರಣ್ಯಪುರಂ ಪೊಲೀಸರಿಗೆ ಒಪ್ಪಿಸಿದ್ದರು. ಆದರೆ, ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಆರೋಪಿಯ ತಂಡದವರು ಪುನೀತ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆಯನ್ನು ಖಂಡಿಸಿ ಹಲ್ಲೆಗೊಳಗಾದ ಪುನೀತ್ ಹಾಗೂ ಸ್ಥಳೀಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಚೈನ್ ಕಳ್ಳತನಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಬೇಕು ಹಾಗೂ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಸಾರ್ವಜನಿಕರು ಪೊಲೀಸರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು. ಪುನೀತ್ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದರು.

ಎರಡು ಪ್ರತ್ಯೇಕ ಪ್ರಕರಣ ದಾಖಲು
ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪುನೀತ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಅಪ್ರಾಪ್ತ ಯುವಕನ ವಿರುದ್ಧ ಒಂದು ಪ್ರಕರಣ ದಾಖಲಾಗಿದ್ದರೆ, ಮತ್ತೊಂದೆಡೆ ಹಲ್ಲೆಗೊಳಗಾದ ಪುನೀತ್ ಹಾಗೂ ಅವರ ಸ್ನೇಹಿತ ಸಂತೋಷ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಎರಡೂ ಕಡೆಯವರಿಂದ ದೂರು ಸ್ವೀಕರಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Mysore
ಪ್ರಜಾಸೇವಾ ಆಂದೋಲನ ಸಭೆ ಯಶಸ್ವಿ : ಅಹವಾಲು ಆಲಿಸಿ, ಸ್ಥಳದಲ್ಲಿಯೇ ಪರಿಹಾರಕ್ಕೆ ಸೂಚಿಸಿದ ಶಾಸಕ ದರ್ಶನ್ ಧ್ರುವನಾರಾಯಣ್
ನಂಜನಗೂಡು : ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಂಜನಗೂಡು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಪ್ರಜಾಸೇವಾ ಆಂದೋಲನ ಸಭೆ ನಡೆಯಿತು.
ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ತಮ್ಮ ಗ್ರಾಮಗಳು ಹಾಗೂ ವಾರ್ಡ್ ಗಳಲ್ಲಿನ ಕುಡಿಯುವ ನೀರು, ರಸ್ತೆ, ಚರಂಡಿ, ವಸತಿ, ಪಿಂಚಣಿ, ಪಹಣಿ, ಹಾಗೂ ಇತರೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ವೈಯಕ್ತಿಕ ಅಹವಾಲುಗಳನ್ನು ಶಾಸಕರ ಮುಂದೆ ಮಂಡಿಸಿದರು.

ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ಶಾಸಕರು, ಸ್ಥಳದಲ್ಲಿಯೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರೆ, ಇನ್ನು ಕೆಲವು ಅರ್ಹ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಕಲ್ಪಿಸುವಂತೆ ಹಾಗೂ ಯಾವುದೇ ಕಾರಣಕ್ಕೂ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ತಮ್ಮ ಮೊದಲ ಆದ್ಯತೆ ಎಂದು ಈ ಸಂದರ್ಭದಲ್ಲಿ ಶಾಸಕರು ತಿಳಿಸಿದರು.
ಈ ಸಭೆಯಲ್ಲಿ ತಹಸೀಲ್ದಾರ್ ಸ್ಮಿತಾ ರಾಮು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಜೆರಾಲ್ಡ್ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ನಂಜನಗೂಡು ವರದಿ ಮಹದೇವಸ್ವಾಮಿ ಪಟೇಲ್
Mysore
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುವ ವೇಳೆ ಕುಸಿದು ಬಿದ್ದ 70 ವರ್ಷದ ಮಹಿಳೆ
ಮೈಸೂರು ಚಾಮುಂಡಿಬೆಟ್ಟದ ತಾರಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುವ ವೇಳೆ 70 ವರ್ಷದ ಮಹಿಳೆಯೊಬ್ಬರು ದಿಢೀರನೆ ಕುಸಿದು ಬಿದ್ದ ಘಟನೆ ನಡೆದಿದೆ.
ನಂಜನಗೂಡು ಪುರಸಭೆಯ ಮಾಜಿ ಸದಸ್ಯೆ ಕೆ. ಪ್ರೇಮಾ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಮೋದಿ ಅವರು ಆಗಮಿಸುತ್ತಿದ್ದಂತೆ ಪ್ರೇಮಾ ಅವರು ಇದ್ದಕ್ಕಿದ್ದಂತೆ ನೆಲಕ್ಕುರುಳಿದ್ದಾರೆ.

ತಕ್ಷಣವೇ ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಗೆ ಕುಡಿಯಲು ನೀರು ನೀಡಿ ಉಪಚರಿಸಿದ್ದಾರೆ. ಬಳಿಕ ಎಲೆಕ್ಟ್ರಾಲ್ ಕುಡಿಸಿ ಸಮಾಧಾನಪಡಿಸಿದ್ದಾರೆ. ಅಲ್ಲದೆ, ಸ್ಥಳದಲ್ಲಿದ್ದ ಸಿಬ್ಬಂದಿ ಹಾಗೂ ವೈದ್ಯರಿಂದ ಮಹಿಳೆಯ ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದ್ದಾರೆ.
ವೈದ್ಯರು ಮಹಿಳೆಯ ರಕ್ತದೊತ್ತಡ (ಬಿಪಿ), ಸಕ್ಕರೆ ಪ್ರಮಾಣ ಸೇರಿದಂತೆ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಮಹಿಳೆಯ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡು ತೆರಳಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿ ಅವರು ಮಹಿಳೆಯ ಆರೋಗ್ಯದ ಬಗ್ಗೆ ವಿಚಾರಿಸಿ ಮಾನವೀಯತೆ ಮೆರೆದಿದ್ದಾರೆ.
Mysore
ಮೈಸೂರು: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ
ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕೆಪಿಎ (ಕರ್ನಾಟಕ ಪೊಲೀಸ್ ಅಕಾಡೆಮಿ) ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ವಿಷ್ಣುವರ್ಧನ್ ಅವರನ್ನು ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಈ ಹಿಂದೆ ವಿಷ್ಣುವರ್ಧನ್ ಅವರು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಕಾರ್ಯನಿರ್ವಹಿಸಿದ್ದರು.
ಮೈಸೂರು ನಗರದ ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಲಾಗಿದೆ.
ಸದ್ಯ ಕರ್ನಾಟಕ ಪೊಲೀಸ್ ಅಕಾಡೆಮಿ (ಕೆಪಿಎ) ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ವಿಷ್ಣುವರ್ಧನ್ ಅವರು ಈ ಹಿಂದೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ನೂತನ ಪೊಲೀಸ್ ಕಮಿಷನರ್ ಆಗಿ ವಿಷ್ಣುವರ್ಧನ್ ನೇಮಕಗೊಂಡಿರುವುದು ಮೈಸೂರು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ.
-
Mandya20 hours agoಯುವತಿಯ ಎಡವಟ್ಟು : ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಸಾ*ವು
-
Special15 hours agoರಾಮಾಯಣ ಭಾಗ 1ರ ಬಜೆಟ್ ₹800 ಕೋಟಿಗೂ ಕಡಿಮೆ: ರಾಮ್ ಗೋಪಾಲ್ ವರ್ಮಾ
-
Kodagu15 hours agoಕೊಡವ ಮುಸ್ಲಿಮರ ಇತಿಹಾಸ ಸಂಶೋಧನಾ ವಿಷಯವಾಗಬೇಕು,ರಾಷ್ಟ್ರಪತಿ ಪದಕ ಪುರಸ್ಕೃತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಎ. ಮಹಮ್ಮದ್ ಅಭಿಮತ
-
Kodagu13 hours agoಕೊಡಗು ಮುಸ್ಲಿಂ ಅಸೋಸಿಯೇಷನ್ ಸಂಘಟನೆ ಅಸ್ತಿತ್ವಕ್ಕೆ – ನೂತನ ಪದಾಧಿಕಾರಿಗಳ ಆಯ್ಕೆ
-
Kodagu23 hours agoಪೊನ್ನಂಪೇಟೆ ಪ್ರಜಾಸೌಧ ಕಾಮಗಾರಿ ಪರಿಶೀಲಿಸಿದ ಶಾಸಕ ಪೊನ್ನಣ್ಣ
-
Kodagu19 hours agoಗಾಂಜಾ ಸೇವಿಸಿ ಗಲಾಟೆ ಆರೋಪಿಗೆ ಸಮುದಾಯ ಸೇವೆ ಶಿಕ್ಷೆ ಸಿದ್ದಾಪುರ ಪಟ್ಟಣ ದಲ್ಲಿ ಒಂದು ಗಂಟೆ ಸಂಚಾರ ನಿಯಂತ್ರಿಸಿದ ಆರೋಪಿ
-
Kodagu17 hours agoತಿತಿಮತಿಯಲ್ಲಿ ಜನಜಾತೀಯ ಗೌರವ ದಿವಸ್ ಆಚರಣೆ
-
State34 minutes agoಕೈಗಾರಿಕಾ ಬೆಳವಣಿಗೆಯಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ₹2.63 ಲಕ್ಷ ಕೋಟಿ ಹೂಡಿಕೆ, 5.43 ಲಕ್ಷ ಉದ್ಯೋಗ ಸೃಷ್ಟಿ!!
